ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಜೆಡಿಎಸ್ ಮಾಜಿ ಅಧ್ಯಕ್ಷ ಕೋಟಿ ಸುಬ್ಬೇಗೌಡ ಶುಕ್ರವಾರ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಕ್ಕಿಹೆಬ್ಬಾಳು ಹೋಬಳಿಯ ಜೆಡಿಎಸ್ ಮುಖಂಡರ ವರ್ತನೆಯಿಂದ ಬೇಸತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಬಾವುಟ ಸ್ವೀಕರಿಸಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ವಿಶ್ವನಾಥ್ ಮಾತನಾಡಿ, ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಏಕೈಕ ಪಕ್ಷವಾಗಿದೆ. ಬ್ರಿಟೀಷರು ಬಿಟ್ಟು ಹೋದಾಗ ಪಾಳುಭೂಮಿಯಂತಿದ್ದ ಭಾರತವನ್ನು ಅಭಿವೃದ್ದಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಬಡವರು, ದೀನ ದಲಿತರಿಗೆ, ಅಲ್ಪ ಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಒದಗಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಬೇಕಾದ ಅಗತ್ಯವಿದೆ ಎಂದರು. ಈ ಸಂದರ್ಭದಲ್ಲಿ ಅಕ್ಕಿಹೆಬ್ಬಾಳು ಹೋಬಳಿಯ ವಿವಿಧ ಗ್ರಾಮಗಳ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.