Friday, April 11, 2025
Google search engine

Homeರಾಜ್ಯಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ : ಸುರ್ಜೆವಾಲಾ ಸ್ಪಷ್ಟನೆ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೇ ಕಾರಣಕ್ಕೂ ಬದಲಾಗಲ್ಲ : ಸುರ್ಜೆವಾಲಾ ಸ್ಪಷ್ಟನೆ

ಬೆಳಗಾವಿ : ನಿನ್ನೆ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವ ಕುರಿತು ಹೇಳಿಕೆ ನೀಡಿದ್ದರು.ಇದೇ ವಿಚಾರವಾಗಿ ಇಂದು ಬೆಳಗಾವಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಆಗಮಿಸಿದ್ದು, ಜನವರಿ 21ರಂದು ನಡೆಯುವ ಕಾಂಗ್ರೆಸ್ ಸಮಾವೇಶದ ಪೂರ್ವಸಿದ್ಧತೆ ಪರಿಶೀಲನೆ ಮಾಡಲಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುವುದಿಲ್ಲ. ಬದಲಾವಣೆ ಆಗುವುದಿದ್ದರೆ ಅವರು ಯಾಕೆ ಬರುತ್ತಿದ್ದರು? ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಸ್ಪಷ್ಟನೆ ನೀಡಿದರು.

ಇದೆ ವೇಳೆ AICC ಸಮಾವೇಶದ ಪೂರ್ವ ಸಿದ್ಧತೆ ಪರಿಶೀಲನೆಯನ್ನು ನಡೆಸಲು ಸುರ್ಜೆವಾಲಾ ಇದೀಗ ಬೆಳಗಾವಿಗೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಎರಡು ದಿನ ಸಮಾವೇಶ ತಯಾರಿ ಪರಿಶೀಲನೆ ಮಾಡಲಿದ್ದಾರೆ. ಜನವರಿ 21ರಂದು ನಡೆಯುವ ಗಾಂಧಿ ಭಾರತ ಸಮಾವೇಶ ಪೂರ್ವಭಾವಿ ಸಭೆ ನಡೆಸಲಿದ್ದು, ಸಭೆಯಲ್ಲಿ ಕಾಂಗ್ರೆಸಿನ ಹಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಇದೀಗ ಸಮರ ಜೋರಾಗಿದ್ದು ಈಗಾಗಲೇ ಕೆಲ ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ.ಕಾಂಗ್ರೆಸ್ ನಲ್ಲಿ ಒಳ ಬೇಗೂದಿಗೆ ಹೈಕಮಾಂಡ್ ಇದೀಗ ಮದ್ದು ಅರಿಯುತ್ತಿದ್ದು, ಪವರ್ ಶೇರಿಂಗ್ ಕದನದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ ಆಗಿದೆ. ಈಗಾಗಲೇ ರಣದೀಪ್ ಸಿಂಗ್ ಸುರ್ಜೆವಾಲಾ ಬೆಳಗಾವಿಗೆ ಆಗಮಿಸಿದ್ದಾರೆ. ಈವೇಳೆ ಸತೀಶ್ ಜಾರಕಿಹೊಳಿ ಸುರ್ಜೆವಾಲಾ ಅವರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

RELATED ARTICLES
- Advertisment -
Google search engine

Most Popular