Friday, April 18, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ಕಪ್ಪಡಿ ಬಳಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 25 ಕೋಟಿ. ರೂ ಮಂಜೂರಾತಿ

ಕೆ.ಆರ್.ನಗರ: ಕಪ್ಪಡಿ ಬಳಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 25 ಕೋಟಿ. ರೂ ಮಂಜೂರಾತಿ

ಶಾಸಕ ಡಿ. ರವಿಶಂಕರ್ ರವರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಗಂಧನಹಳ್ಳಿ ಜಿ.ಎಂ.ಹೇಮಂತ್ ಮಲ್ಲೇಗೌಡ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಕೆ.ಆರ್.ನಗರ ತಾಲೂಕಿನ‌ ಗಂಧನಹಳ್ಳಿ ಗ್ರಾಮದ ಜನತೆಯ ಬಹುದಿನದ ಬೇಡಿಕೆಯಾದ, ಗಂಧನಹಳ್ಳಿ-ಹೆಬ್ಬಾಳು ಮಾರ್ಗದ ನಡುವಿನ ಕಾವೇರಿ ನದಿಗೆ ಅಡ್ಡಲಾಗಿ ಕಪ್ಪಡಿ ಬಳಿ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ ಮಂಜೂರಾತಿ ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 25 ಕೋಟಿ ರೂ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ಈ ಸೇತುವೆ ನಿರ್ಮಾಣದಿಂದ ಗಂಧನಹಳ್ಳಿ ಸುತ್ತ ಮುತ್ತಲಿನ ಗ್ರಾಮಸ್ಥರು ಹೆಬ್ಬಾಳಿಗೆ ಬರಲು ಮತ್ತು ಹೆಬ್ಬಾಳು ಸುತ್ತ ಮುತ್ತಲಿನ ಗ್ರಾಮಸ್ಥರು ಗಂಧನಹಳ್ಳಿಗೆ ತೆರಳಲು ಹಂಪಾಪುರ ಇಲ್ಲವೇ ಚುಂಚನಕಟ್ಟೆ ಮಾರ್ಗವಾಗಿ ಹೋಗಬೇಕಾಗಿತ್ತು.

ಇದನ್ನು ಮನಗೊಂಡು ಶಾಸಕ ಡಿ.ರವಿಶಂಕರ್ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಪ್ಪಡಿ ಬಳಿ ಸೇತುವೆ ನಿರ್ಮಾಣಕ್ಕೆ ಅನುಧಾನ ನೀಡುವಂತೆ ಮನವಿ ಸಲ್ಲಿಸಿದ್ದರು. ಸಚಿವ ಸಂಪೂಟ ಸಭೆಯಲ್ಲಿ ಈ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿರುವುದಕ್ಕೆ ಶಾಸಕ ಡಿ.ರವಿಶಂಕರ್ ಅವರನ್ನು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಗಂಧನಹಳ್ಳಿ ಜಿ.ಎಂ.ಹೇಮಂತ್ ಮಲ್ಲೇಗೌಡ ಅಭಿನಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular