ಕೆ.ಆರ್.ನಗರ: ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳ ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುವ ಸಲುವಾಗಿ ಹಲವು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವಂತೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಇದ್ದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ರಾಷ್ಟಿಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶೀಘ್ರದಲ್ಲಿಯೇ ಸಾಲಿಗ್ರಾಮ, ಭೇರ್ಯ, ಮಿರ್ಲೇ, ಹೊಸೂರು ಮತ್ತು ಕೆ.ಆರ್.ನಗರದ ಸಾರ್ವಜನಿಕ ಆಸ್ಪತ್ರೆಗಳಿಗೆ ಅಗತ್ಯ ಸವಲತ್ತು ಒದಗಿಸಲು ಮೇಲ್ದರ್ಜೇಗೆರಿಸಲಾಗುವುದು ಎಂದರು.
ಆರೋಗ್ಯ ಇಲಾಖೆವತಿಯಿಂದ ನಡೆಸುವ ೩೪ ಕಾರ್ಯಕ್ರಮಗಳಲ್ಲಿ ಬರುವಂತ ಮಾಹಿತಿಯನ್ನು ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ತಿಳಿಸುವ ಮೂಲಕ ಅವುಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಹಕಾರ ನೀಡಬೇಕೆಂದು ಕೋರಿದರು.
ಆಸ್ಪತ್ರೆಗಳನ್ನು ಉನ್ನತಿಕರಿಸುವುದರ ಜೊತೆಗೆ ಡಯಾಲಿಸಿಸ್ ಘಟಕವನ್ನು ಸಾಲಿಗ್ರಾಮದಲ್ಲಿ ತೆರೆಯಲಾಗುತ್ತದೆ ಹಾಗೂ ಎಲ್ಲಾ ಆಸ್ಪತ್ರೆಗಳಿಗೂ ತುರ್ತು ವಾಹನಗಳ ಕೊಡಿಸಲಾಗುತ್ತದೆ ಎಂದು ಮಾಹಿತಿ ನೀಡಿದ ಶಾಸಕರು ವೈದ್ಯರು ಮತ್ತು ಸಿಬ್ಬಂದಿಗಳು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕೆಂದು ಮನವಿ ಮಾಡಿದರು.

ಇಲ್ಲಿನ ವೈದ್ಯರು ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಿಕೊಟ್ಟಾಗ ೧೦೮ ಆಂಬುಲೆನ್ಸ್ ಚಾಲಕರು ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುತ್ತಿದ್ದಾರೆ ಎಂದ ಆರೋಪ ಕೇಳಿ ಬಂದಿದೆ ಇದು ಯಾವುದೇ ಕಾರಣಕ್ಕೂ ಪುನರಾವರ್ತನೆ ಆಗಬಾರದು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಬೇಕೆಂದು ಸೂಚಿಸಿದರು.
ಶಿಕ್ಷಣ ಮತ್ತು ಆರೋಗ್ಯದಲ್ಲಿ ಉತ್ತಮ ಸಾಧನೆ ಮಾಡಿದಾಗ ಆದೇಶ ಅಭಿವೃದ್ದಿಯಲ್ಲಿ ಪ್ರಗತಿ ಕಾಣಲು ಸಾಧ್ಯ ಇದನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಅರ್ಥ ಮಾಡಿಕೊಂಡು ಉತ್ತಮ ಸೇವೆ ನೀಡಬೇಕೆಂದು ಸಲಹೆ ನೀಡಿದ ಶಾಸಕರು ಆಶಾ ಕಾರ್ಯಕರ್ತೆಯರು ಹೆರಿಗೆ ಸಮಯದಲ್ಲಿ ತಾಯಿ ಮತ್ತು ಶಿಶು ಮರಣ ಆಗುವುದನ್ನ ತಡೆಗಟ್ಟಲು ಗರ್ಭೀಣಿ ಮಹಿಳೆಯರಿಗೆ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಅಶೋಕ್, ಕೆ.ಆರ್.ನಗರ ಸಾರ್ವನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನವೀನ್, ವೈದ್ಯರುಗಳಾದ ಡಾ.ದೀವ್ಯತಾ, ಡಾ.ಹೇಮ, ಡಾ.ನಿಸರ್ಗ, ಡಾ.ದರ್ಶನ್, ಆರೋಗ್ಯ ಇಲಾಖೆಯ ಕೆ.ವಿ.ರಮೇಶ್, ಸಿ.ಎಂ.ರೇಖಾ, ಮಹೇಶ್, ಕುಮಾರ್, ಪ್ರಕಾಶ್ ಮತ್ತಿತರು ಹಾಜರಿದ್ದರು.