Thursday, April 17, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ:ಫೆ.೧೬ರಂದು ಮೀನಾಕ್ಷಿ ಸಮೇತ ಅರ್ಕೇಶ್ವರಸ್ವಾಮಿ ರಥೋತ್ಸವ

ಕೆ.ಆರ್.ನಗರ:ಫೆ.೧೬ರಂದು ಮೀನಾಕ್ಷಿ ಸಮೇತ ಅರ್ಕೇಶ್ವರಸ್ವಾಮಿ ರಥೋತ್ಸವ

ವರದಿ:ವಿನಯ್ ದೊಡ್ಡಕೊಪ್ಪಲು

ಕೆ .ಆರ್.ನಗರ: ಕೆ.ಆರ್.ನಗರದ ಹಳೆ ಎಡತೊರೆಯ ಮೀನಾಕ್ಷಿ ಸಮೇತ ಅರ್ಕೇಶ್ವರಸ್ವಾಮಿ ದೇವಾಲಯದ ಜೀರ್ಣೋದ್ದಾರ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ದೇವಾಲಯದ ಸ್ಥಗಿತವಾಗಿದ್ದ ಮೀನಾಕ್ಷಿ ಸಮೇತ ಅರ್ಕೇಶ್ವರಸ್ವಾಮಿ ರಥೋತ್ಸವವನ್ನು ಫೆ.೧೬ರಂದು ಅತ್ಯಂತ ವಿಜೃಂಭಣೆಯಿoದ ನಡೆಸಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಹಳೆ ಎಡತೊರೆ ಕಾವೇರಿ ನದಿ ದಂಡೆಯಲ್ಲಿರುವ ದೇವಾಲಯದಲ್ಲಿ ಸೋಮವಾರ ನಡೆದ ಪುಣ್ಯಾಹವಾಚನ ಪ್ರತಿಷ್ಟಾಂಗ ಹೋಮ, ಪ್ರಾಣ ಪ್ರತಿಷ್ಠೆ ಮತ್ತು ನೂತನ ಕಳಸ ಗೋಪುರ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜಾತ್ರೆ ನಡೆಸುವ ಸಂಬoಧ ಫೆಬ್ರವರಿ ಮೊದಲ ವಾರದಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಕಳೆದ ಮೂರು ದಿನಗಳಿಂದ ದೇವಾಲಯದಲ್ಲಿ ನಡೆಯುತ್ತಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇಂದು ಸಂಪನ್ನಗೊoಡಿದ್ದು ನಾಳೆಯಿಂದಲೇ ಜಾತ್ರೆ ಮತ್ತು ರಥೋತ್ಸವ ನಡೆಸುವ ಸಂಬoಧ ತಹಶೀಲ್ದಾರರು ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಅಗತ್ಯ ಗಮನ ಹರಿಸುವಂತೆ ಸೂಚಿಸಲಾಗಿದೆ ಎಂದವರು ಮಾಹಿತಿ ನೀಡಿದರು.
ದೇವಾಲಯದ ಆವರಣದಲ್ಲಿ ಜಾತ್ರಾ ಸಮಯ ನಡೆಯುವ ಜಾನುವಾರು ಜಾತ್ರೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲು ಅಗತ್ಯವಿರುವ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದ್ದು ತಮ್ಮ ರಾಸುಗಳೊಂದಿಗೆ ಜಾತ್ರೆಗೆ ಬರುವ ರೈತರಿಗೆ ಮೂಲಭೂತ ಸವಲತ್ತು ಕಲ್ಪಿಸುವುದರ ಜತೆಗೆ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ನುಡಿದರು.

ಅರ್ಕೇಶ್ವರಸ್ವಾಮಿ ದೇವಾಲಯದ ಜೀರ್ಣೋದ್ದಾರ ಕಾಮಗಾರಿ ಪೂರ್ಣಗೊಂಡಿದ್ದು ಇದರ ಜತೆಗೆ ಕಾವೇರಿ ನದಿ ಮಧ್ಯ ಭಾಗದಲ್ಲಿ ನಿರ್ಮಾಣ ಮಾಡಲಿರುವ ಶಿವನ ಪ್ರತಿಮೆಯ ಕಾಮಗಾರಿಗೆ ವೇಗ ನೀಡಿ ಮುಂದಿನ ವರ್ಷದ ರಥೋತ್ಸವದ ವೇಳೆಗೆ ಪ್ರತಿಮೆ ಅನಾವರಣ ಮಾಡಲಿದ್ದು ಈ ಸಂಬoಧ ಗುತ್ತಿಗೆದಾರರಿಗೆ ಮತ್ತು ಸಂಬoಧಿತ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ನವ ನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಪುರಸಭೆ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ಸದಸ್ಯರಾದ ನಟರಾಜು, ಶಂಕರ್‌ಸ್ವಾಮಿ, ಶಂಕರ್, ಮಾಜಿ ಸದಸ್ಯ ಕೆ.ವಿನಯ್, ಕೆ.ಎಲ್.ರಾಜೇಶ್, ನಗರ ಯೋಜನಾ ಪ್ರಾಧಿಕಾರಿದ ಮಾಜಿ ಅಧ್ಯಕ್ಷ ವೈ.ಎಸ್.ಕುಮಾರ್, ಮಾಜಿ ನಿರ್ದೇಶಕರಾದ ಕೆ.ಎಸ್.ಮಹೇಶ್, ಸೈಯದ್‌ಜಾಬೀರ್, ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲತಾರವಿ, ರಾಣಿಬಾಲಶಂಕರ್, ಟಿಎಪಿಸಿಎಂಎಸ್ ನಿರ್ದೇಶಕರಾದ ಎಸ್.ಸಿದ್ದೇಗೌಡ, ಹೆಚ್.ಪಿ.ಪ್ರಶಾಂತ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ತಾ.ಪಂ. ಇಒ ಜಿ.ಕೆ.ಹರೀಶ್, ಪುರಸಭೆ ಮುಖ್ಯಾಧಿಕಾರಿ ಡಾ.ಜಯಣ್ಣ, ದೇವಾಲಯದ ಪಾರುಪತ್ತೇದಾರ್ ಆರತಿ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular