Friday, April 18, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ:ಇವಿಎಂ ಬಳಕೆ , ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ...

ಕೆ.ಆರ್.ನಗರ:ಇವಿಎಂ ಬಳಕೆ , ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ ಜಾಗೃತಿ

ಕೆ.ಆರ್.ನಗರ : ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ ಜಾಗೃತಿ ಮೂಡಿಸಲಾಯಿತು.

ಪಟ್ಟಣದ ಆಡಳಿತ ಸೌದದಲ್ಲಿ ಸಭಾಂಗಣದಲ್ಲಿ ವಿದ್ಯುನ್ಮಾನ ಮತಯಂತ್ರ ತರಬೇತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು, ಮಾಧ್ಯಮ ಪ್ರತಿನಿಧಿಗಳಿಗೆ ಮತ ಚಲಾಯಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ ಗ್ರೇಡ್ -೨ ತಹಸೀಲ್ದಾರ್ ಬಾಲಸುಬ್ರಹ್ಮಣ್ಯಂ ಅವರು ಮುಂಬರುವ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲೂಕನಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಹಾಗೂ ಮತದಾನ ಖಾತ್ರಿ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಅವಳಿ ತಾಲೂಕಿನಾಧ್ಯಂತ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಯಂತ್ರದ ಕಾರ್ಯ ವೈಖರಿ ಕುರಿತು ಪ್ರಾತ್ಯಕ್ಷಿಕೆ ನಡೆಸಲಾಗುವುದು. ಈ ಪ್ರಾತ್ಯಕ್ಷಿಯಲ್ಲಿ ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ. ಈ ಪ್ರಾತ್ಯಕ್ಷತೆ ಯುವ ಮತದಾರರಿಗೆ ಹಾಗೂ ಮೊದಲ ಬಾರಿಗೆ ಮತದಾನ ಮಾಡುವಂತಹವರಿಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ವಿ.ವಿ. ಪ್ಯಾಟ್‌ ಒಳಗೊಂಡ ವಿದ್ಯುನ್ಮಾನ ಮತಯಂತ್ರದಲ್ಲಿ ಮತದಾರರು ಮತ ಚಲಾಯಿಸುವಾಗ ಚಿಹ್ನೆಯ ಬಗ್ಗೆ ಏಳು ಸೆಕೆಂಡಿನ ತನಕ ತಾವು ಮಾಡಿರುವ ಮತದಾನ ಸರಿಯಾಗಿದೆಯೆ ಎಂದು ಪರಿಶೀಲಿಸಲು ಅವಕಾಶ ಇರುತ್ತದೆ ಎಂದು ಪ್ರಾತೀಕ್ಷತೆ ಮೂಲಕ ಮತದಾರರಿಗೆ ತಿಳಿಸಿದರು.

ಯಂತ್ರದ ನಿರ್ವಹಣೆ ಬಗ್ಗೆ ಯಾವುದೇ ಆತಂಕ, ಸಂಶಯ ಉಂಟಾದರೆ ಮತಗಟ್ಟೆಯ ಅಧಿಕಾರಿಗಳಿಗೆ ದೂರು ನೀಡುವ ಅವಕಾಶ ಇದೆ ಎಂದು ಹೇಳಿದರು. ಇವಿಎಂ ಮತ್ತು ವಿ.ವಿ. ಪ್ಯಾಟ್‌ ಮೆಷಿನ್‌ ವಿದ್ಯುನ್ಮಾನ ಮತ ಯಂತ್ರದ ಬಗ್ಗೆ ಮತದಾರರು ಗೊಂದಲವಿಲ್ಲದೆ ಮತ ಚಲಾಯಿಸುವ ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದರು.

ತಾಲೂಕು ಆಡಳಿತ ಸೌದದ ಶಿರೇಸ್ತಾದರ್ ಅಸ್ಲಂ ಭಾಷ, ಸಾಲಿಗ್ರಾಮ ತಾಲೂಕು ತಾಲೂಕು ಕಚೇರಿಯ ಚುನಾವಣಾ ಶಿರೇಸ್ತಾದರ್ ಶಿವಕುಮಾರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿನಯ್ ದೊಡ್ಡಕೊಪ್ಪಲು, ಉಪಾಧ್ಯಕ್ಷ ಸಿ.ಸಿ.ಮಹದೇವ, ಪ್ರದಾನ ಕಾರ್ಯದರ್ಶಿ ಭೇರ್ಯ ಮಹೇಶ್, ಕಾರ್ಯದರ್ಶಿ ಆನಂದ್ ಹೊಸೂರು, ನಿರ್ದೇಶಕರಾದ ಸ್ಪಿನ್ ಕೃಷ್ಣ, ಮಹಮ್ಮದ್ ಸಬಿರ್ ಸೇರಿದಂತೆ ಅನೇಕ ಯುವಕರು, ಯುವತಿಯರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular