ವರದಿ:ವಿನಯ್ ದೊಡ್ಡಕೊಪ್ಪಲು
ಕೆ.ಅರ್.ನಗರ : ವಿಶೇಷ ಚೇತನ ಮಕ್ಕಳನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ಸಿಗುವ ಉಚಿತ ಶಿಕ್ಷಣ ಮತ್ತು ಸವಲತ್ತುಗಳಗಳನ್ನು ಒದಗಿಸಿ ಕೊಡಲು ಶಿಕ್ಷಣ ಇಲಾಖೆ ಶ್ರಮಿಸುತ್ತಿದೆ ಎಂದು ತಾಲೂಕು ಸಮನ್ವಯ ಸಂಪನ್ಮೂಲ ಶಿಕ್ಷಕ ಲಕ್ಕಿಕುಪ್ಪೆ ಶಂಕರೇಗೌಡ ಹೇಳಿದರು.
ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ವಿಶೇಷ ಚೇತನ ಮಕ್ಕಳ ಶಿಕ್ಷಣ ಅರಿವು ಮತ್ತು ಜಾಗೃತಿ ಜಾಥ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಈ ಕಾರ್ಯಕ್ರಮದ ಮೂಲಕ ವಿಶೇಷ ಚೇತನ ಮಕ್ಕಳಿಗೆ UDID ಕಾರ್ಡ್ ವಿತರಣೆಯ ಮಾಹಿತಿ, ಫಿಜಿಯೋಥೆರಪಿ ಸಾರಿಗೆ ಭತ್ಯೆ, ಬೆಂಗಾವಲು ಭತ್ಯೆ, ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ರೀಡರ್ ಮತ್ತು ವಿವಿಧ ಸಾಧನ ಸಲಕರಣೆಗಳ ವಿತರಣೆಯನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವಿಶೇಷ ಚೇತನ ಮಕ್ಕಳ ಬಗ್ಗೆ ಪ್ರತ್ಯೇಕವಾಗಿ ನೋಡುವ ಸಮುದಾಯಕ್ಕೆ ಜಾಗೃತಿ ಮೂಡಿಸಿ ಎಲ್ಲಾ ಶಿಕ್ಷಕರಿಗೆ ತರಬೇತಿ ನೀಡಿ ಈ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಶಿಕ್ಷಣ ಇಲಾಖೆಯು ಮಾಡುತ್ತಿದ್ದು ಇದಕ್ಕೆ ಪೋಷಕ ವರ್ಗದವರು ಸಹಕಾರ ನೀಡಬೇಕೆಂದರು.
ನಂತರ ಕರ್ಪೂರವಳ್ಳಿ ಗ್ರಾ.ಪಂ.ಮತ್ತು ಅಂಗನವಾಡಿ ಕೇಂದ್ರಗಳಿಗೆ ಬೇಟಿ ನೀಡಿ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಬಿ.ಐ.ಇ.ಆರ್.ಟಿ.ಗಳಾದ ಜಿ.ಕೆ. ನಾಗರಾಜು, ಎಂ ಪ್ರೇಮ, ಮುಖ್ಯ ಶಿಕ್ಷಕರಾದ ಸತೀಶ್, ಸಹ ಶಿಕ್ಷಕರಾದ ಸೀಮಾ ಬೇಗಂ, ವೇದ ಸೇರಿದಂತೆ ಮತ್ತಿತರರು ಹಾಜರಿದ್ದರು.