Friday, April 11, 2025
Google search engine

Homeಅಪರಾಧಕೆ.ಆರ್.ನಗರ: ಸಾಲ ಭಾದೆ ತಾಳಲಾರದೇ ರೈತ ಆತ್ಮಹತ್ಯೆ

ಕೆ.ಆರ್.ನಗರ: ಸಾಲ ಭಾದೆ ತಾಳಲಾರದೇ ರೈತ ಆತ್ಮಹತ್ಯೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ : ಸಾಲ ಭಾದೆ ತಾಳಲಾರದೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಕೆ ಆರ್ ನಗರ ತಾಲೂಕು ಕಸಬಾ ಹೋಬಳಿ ಕನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲೇ.ರಾಜೇಗೌಡ ಅವರ ಮಗ ಪ್ರಭಾಕರ್ (65 ) ಎಂಬ ರೈತ ಸಾಲಭಾದೆಯಿಂದ ಬಿತ್ತನೆ ಬೀಜ ಕೆಡ ದಂತೆ ಉಪಯೋಗಿಸುವ ಕಾಳು ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಿಪ್ಪೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1 ಲಕ್ಷ ಬೆಳೆ ಸಾಲ ಮತ್ತು ಕೆನರಾ ಬ್ಯಾಂಕಿನಲ್ಲಿ ಚಿನ್ನಾಭರಣ ಸಾಲ ಮತ್ತು ಕೈ ಸಾಲ 3 ಲಕ್ಷದಷ್ಟು ಸಾಲವನ್ನು ವನ್ನು ಮಾಡಿಕೊಂಡಿದ್ದರು. ಇತ್ತೀಚೆಗೆ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಭತ್ತದ ಬೆಳೆಗೆ ಬೆಂಕಿ ರೋಗ ಬಿದ್ದ ಕಾರಣ ಸಾಲ ತೀರಿಸುವುದು ಹೇಗೆ ಎಂಬ ಚಿಂತೆ ಒಳಗಾಗಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ ಎಂದು ಮೃತ ರೈತನ ಕುಟುಂಬದವರು ಮಾಹಿತಿ ನೀಡಿದ್ದಾರೆ.

ಈ ಘಟನೆಯ ಸಂಬಂಧ ಮೃತ ರೈತನ ಮಗ ವಿಜಯ್ ಕುಮಾರ್ ಅವರು ಕೆ. ಆರ್ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದು ಈ ಸಂಬಂಧ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular