Friday, April 11, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ಶೌಚಾಲಯ ಕಟ್ಟಡದ ನಿರ್ಮಾಣಕ್ಕೆ ಶಾಸಕ ಡಿ.ರವಿಶಂಕರ್ ಭೂಮಿ ಪೂಜೆ

ಕೆ.ಆರ್.ನಗರ: ಶೌಚಾಲಯ ಕಟ್ಟಡದ ನಿರ್ಮಾಣಕ್ಕೆ ಶಾಸಕ ಡಿ.ರವಿಶಂಕರ್ ಭೂಮಿ ಪೂಜೆ

ವರದಿ : ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯದ ಕಟ್ಟಡದ
ನಿರ್ಮಾಣಕ್ಕೆ ಶಾಸಕ ಡಿ.ರವಿಶಂಕರ್ ಭೂಮಿ ಪೂಜೆ ನೆರವೇರಿಸಿದರು. ಆನಂತರ ಮಾತನಾಡಿದ ಅವರು
ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿಯ
ಮನವಿ ಮೇರೆಗೆ ಅನುದಾನ ನೀಡಲಾಗುತ್ತದೆ ಎಂದು ಹೇಳಿದರು.

ಹೆಣ್ಣು ಮಕ್ಕಳು ಇರುವಂತಹಾ ಶಾಲೆಗಳು, ಕಾಲೇಜುಗಳು ಮತ್ತು ವಸತಿ ಶಾಲೆಗಳಿಗೆ ಅಗತ್ಯಕ್ಕೆ ತಕ್ಕಂತೆ ಶೌಚಾಲಯಗಳನ್ನು ಒದಗಿಸಲು ಬದ್ದನಾಗಿದ್ದು ಬೇಕಾಗಿರುವ ಅನುದಾನ ನೀಡುತ್ತಿದ್ದೇನೆ ಶಾಲೆಯ ಮುಖ್ಯಸ್ಥರು ಮಕ್ಕಳ ಸಂಖ್ಯೆಗೆ ತಕ್ಕಂತೆ ಶೌಚಾಲಯಗಳನ್ನು ನಿರ್ಮಾಣ ಮಾಡಿಸಿಕೊಳ್ಳಬೇಕು ಇದರ ಜತೆಗೆ ಎಲ್ಲಾ ರೀತಿಯ
ಮೂಲಭೂತ ಸೌಕರ್ಯ ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೌಚಾಲಯ ನಿರ್ಮಾಣ ಮಾಡಲು ೫ ಲಕ್ಷ ಅನುದಾನ ನೀಡಲಾಗಿದ್ದು
ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದ ಶಾಸಕರು ಶಾಲಾ ಕಾಲೇಜುಗಳಲ್ಲಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಶೌಚಾಲಯ ಸೇರಿದಂತೆ ಇತರ ಮೂಲ ಸೌಕರ್ಯ ಒದಗಿಸಲು ಅನುದಾನ ಮೀಸಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪುರಸಭೆ ಸದಸ್ಯರಾದ ಕೋಳಿಪ್ರಕಾಶ್, ನಟರಾಜು, ಶಂಕರ್‌ಸ್ವಾಮಿ, ಮಾಜಿ ಅಧ್ಯಕ್ಷ ನರಸಿಂಹರಾಜು, ಮಾಜಿ ಸದಸ್ಯ ಕೆ.ವಿನಯ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ನಗರಾಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸೈಯದ್ ಜಾಬೀರ್, ಸಾರ್ವಜನಿಕ ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ಹೆಚ್.ಹೆಚ್.ನಾಗೇಂದ್ರ, ಲೋಕೇಶ್, ಕಾಲೇಜು ಪ್ರಾಂಶುಪಾಲ ಕೃಷ್ಣಯ್ಯ, ಸಿಡಿಸಿ ಉಪಾಧ್ಯಕ್ಷೆ ಸುನಿತಾ, ಗುತ್ತಿಗೆದಾರರಾದ ಮನುಗನಹಳ್ಳಿರಾಜಯ್ಯ, ಮುಖಂಡರಾದ ಕೆ.ಪಿ.ಜಗದೀಶ್, ಸುಧಾಕರ, ಬೆಟ್ಟುಮಹದೇವ್, ಕೆ.ಎಂ.ಶ್ರೀನಿವಾಸ್, ಸುಮಂತ್, ಕೃಷ್ಣೇಗೌಡ, ಜೆ.ಶಿವಣ್ಣ, ಗೊರಗುಂಡಿಚoದ್ರು ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular