ಕೆ.ಆರ್.ನಗರ : ಕೆ.ಆರ್.ನಗರ ತಾಲೂಕು ಸರ್ಕಾರಿ ನೌಕರ ಸಂಘದ ವತಿಯಿಂದ 2022-2023ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ (ಶೇ.90) ಉತ್ತೀರ್ಣರಾದ ತಾಲೂಕಿನ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಸಂಘದ ತಾಲೂಕು ಅಧ್ಯಕ್ಷ ಸಿ.ಜೆ.ಅರುಣಕುಮಾರ್ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ ,ವರ್ಗಾವಣೆ ಪತ್ರದ ನಕಲು ಮತ್ತು ಎರಡು ಪಾಸ್ ಪೋರ್ಟ್ ಭಾವ ಚಿತ್ರದ ಜೊತೆ ಮೊಬೈಲ್ ಸಂಖ್ಯೆಯನ್ನು ನೀಡುವಂತೆ ಕೋರಿದ್ದಾರೆ. ಅರ್ಜಿಗಳನ್ನು ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಪ್ರಶಾಂತ್ ಅವರ ದೂರವಾಣಿ ಸಂಖ್ಯೆ 8722295788 ಮತ್ತು ಖಜಾಂಚಿ ಪ್ರಸನ್ನ ಅವರ ದೂರವಾಣಿ 9900501709 ಅನ್ನು ಸಂಪರ್ಕಿಸುವಂತೆ ಕೋರಿದ್ದಾರೆ.