ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಶೈಕ್ಷಣಿಕ ಪ್ರಗತಿಗೆ ರಾಜ್ಯ ಸರ್ಕಾರ ಹೆಚ್ಚು ಆದ್ಯತೆ ನೀಡಿ ಹತ್ತು ಹಲವು ಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಉತ್ತಮ ಭವಿಷ್ಯ
ರೂಪಿಸಿಕೊಳ್ಳಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ತಾಲೂಕಿನ ಕಾಳೇನಹಳ್ಳಿ ಆದರ್ಶ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಸ್ಪರ್ದೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ ಇದರೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಅಡಗಿರುವ ಅಸಾಧಾರಣ ಪ್ರತಿಭೆಯನ್ನು ಅನಾವರಣ ಮಾಡಿ ಅದಕ್ಕೆ ಪೋಷಣೆ ನೀಡಿ ಅವರು ಗ್ರಾಮ ಮಟ್ಟದಿಂದ ರಾಜ್ಯ ಹಾಗೂ ರಾಷ್ಟç ಮಟ್ಟದವರೆಗೂ ಸ್ಪರ್ದಿಸಿ ಉತ್ತಮ ಸಾಧನೆ ಮಾಡಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದ್ದು ಸೋಲು ಗೆಲುವನ್ನು ಲೆಕ್ಕಿಸದೆ ಭಾಗವಹಿಸಬೇಕು ಎಂದು ಕಿವಿ ಮಾತು ಹೇಳಿದರು.

ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕಿನ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿದ್ದು ಇದು ಇತರರಿಗೆ ಮಾದರಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ ಶಾಸಕರು ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಸದಾ ಬೆನ್ನೆಲುಬಾಗಿ ನಿಲ್ಲಬೇಕು ಎಂದು
ತಿಳಿಸಿದರು.
ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಶಾಲೆಗಳ ದುರಸ್ಥಿಗೆ ಮೂರು ಕೋಟಿ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಿದ್ದು ಇದರ ಜತೆಗೆ ಆದರ್ಶ ಶಾಲೆಯ ಒಳಾವರಣ ಸಮತಟ್ಟು ಕೆಲಸಕ್ಕೂ ಹಣ ನೀಡಲಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯವಿರುವ ಶಾಲೆಗಳ ದುರಸ್ಥಿಯ ತುರ್ತು ಕೆಲಸವನ್ನು ಆದ್ಯತೆಯ ಮೇರೆಗೆ ನಿರ್ವಹಿಸಿ ನನಗೆ ವರದಿ ನೀಡಬೇಕು ಎಂದು ತಾಕೀತು ಮಾಡಿದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ನಾಲ್ಕನೇ ಸ್ಥಾನಗಳಿಸಿದ್ದು ಈ ಬಾರಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನಕ್ಕೇರಲು ಈಗಿನಿಂದಲೇ ಪೂರ್ವ ತಯಾರಿ ಕೈಗೊಂಡು ಪ್ರೌಢಶಾಲಾ ಶಿಕ್ಷಕರುಗಳಿಗೆ ಅಗತ್ಯ ತರಬೇತಿ
ಮತ್ತು ಮಾರ್ಗದರ್ಶನ ನೀಡಬೇಕು ಎಂದು ಆದೇಶಿಸಿದ ಅವರು ಈ ವಿಚಾರದಲ್ಲಿ ನಾನು ಎಲ್ಲಾ ರೀತಿಯ
ಸಲಹೆ ಮತ್ತು ಸಹಕಾರ ನೀಡಿ ಶಿಕ್ಷಕರ ಬೆನ್ನೆಲುಬಾಗಿ ನಿಲ್ಲುತ್ತೇನೆಂದು ಭರವಸೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ ಮಾತನಾಡಿ ರಾಜ್ಯ ಸರ್ಕಾರ ೨೦೦೪ ರಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಎಂಬ ವಿಭಿನ್ನ ಕಾರ್ಯಕ್ರಮ ಆರಂಬಿಸಿದ್ದು ಪಠ್ಯಕ್ಕೆ ಪೂರಕವಾದ ಕಲಿಕೆಯನ್ನು ಕಲಿಯುವುದರ ಜತೆಗೆ ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರಿಯಾತ್ಮಕ ಸಾಮರ್ಥ್ಯವನ್ನು ಸಾಬೀತುಪಡಿಸಲು ಸೂಕ್ತವಾದ
ಅವಕಾಶ ದೊತೆಯಲಿದ್ದು ಇಂತಹ ಕಾರ್ಯಕ್ರಮದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೆ.ಪಿ.ಜಗದೀಶ್, ಮುಖ್ಯ ಶಿಕ್ಷಕಿ ರುಕ್ಮಿಣಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿದ ವೇಷ ಭೂಷಣ ಮತ್ತು ಇತರ ಕ್ರಿಯಾತ್ಮಕ ಚಟುವಟಿಕೆಗಳು ಎಲ್ಲರಿಂದಲೂ ಗಮನ ಸೆಳೆದವು.

ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಶೈಲಜಾಮದುಚಂದ್ರ, ಸದಸ್ಯರಾದ ದೊಡ್ಡಕೊಪ್ಪಲುರವಿ, ಗೊರಗುಂಡಿಚoದ್ರು,ಕವಿತಾಧನಂಜಯ, ಶಿಲ್ಪಾಧರ್ಮ, ಕಲಾವತಿ, ಮಂಜುನಾಥ್, ಸಣ್ಣಪ್ಪ, ಬಿಆರ್‌ಸಿ ವೆಂಕಟೇಶ್, ಸಿಆರ್‌ಪಿ ಉದಯಕುಮಾರ್, ಶಿಕ್ಷಣ ಸಂಯೋಜಕ ದಾಸಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಸಿಡಿಪಿಒ ಸಿ.ಎಂ.ಅಣ್ಣಯ್ಯ, ಅಕ್ಷರ ದಾಸೋಹ ಅಧಿಕಾರಿ ಸ್ವಾಮಿಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಬಿ.ಎಲ್.ಮಹದೇವ್, ಶಂಕರೇಗೌಡ, ಸಿ.ಈ.ಉಮೇಶ್, ಪೂರ್ಣಿಮ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ, ಉಪಾಧ್ಯಕ್ಷ ಕೃಷ್ಣನಾಯಕ, ದೈಹಿಕ ಶಿಕ್ಷಣಾಧಿಕಾರಿ ಎಂ.ಪಿ.ಕುಮಾರಸ್ವಾಮಿ, ಸಿ.ಆರ್.ಪಿ.ಚಿಕ್ಕಕೊಪ್ಪಲು ರಮೇಶ್ ಶಿಕ್ಷಕರಾದ ಸೈಯದ್‌ರಿಜ್ವಾನ್,
ಜ್ಯೋತಿಕುಮಾರ್ ,ಮತ್ತಿತರರು ಇದ್ದರು.