ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ನವ ಭಾರತ ನಿರ್ಮಾಣಕ್ಕಾಗಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಇದನ್ನು ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅವರಗಳ ಸುರಕ್ಷತೆಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಸಂಗೋಳಿ ರಾಯಣ್ಣ ಸಮುದಾಯ ಭವನದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ನಡೆದ ನೊಂದಾಯಿತ ಕಟ್ಟಡ ಕಾರ್ಮಿಕರುಗಳಿಗೆ ವಿವಿಧ ಟ್ಯೂಲ್ಸ್ಕಿಟ್ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್
ವಿತರಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರ ಹಿತದೃಷ್ಠಿಯಿಂದ ಸರ್ಕಾರ ಜಾರಿಗೊಳಿಸಿರುವ ವಿಮಾ ಸೌಲಭ್ಯ ಮತ್ತು ಮಕ್ಕಳಿಗಾಗಿ ನೀಡುವ ವಿದ್ಯಾರ್ಥಿ ವೇತನ ಇತರ ಸವಲತ್ತುಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು.
ಕಾರ್ಮಿಕ ಇಲಾಖೆಯವರು ನೊಂದಣಿ ಅಧಾಲತ್ ನಡೆಸಿ ಅರ್ಹರಿಗೆ ಕಾರ್ಡ್ಗಳನ್ನು ವಿತರಿಸುವುದರ ಜತೆಗೆ ಸಕಾಲದಲ್ಲಿ ಹಳೆ ಕಾರ್ಡ್ಗಳನ್ನು ನವೀಕರಣ ಮಾಡಿಕೊಡಬೇಕೆಂದು ಸೂಚಿಸಿದ ಶಾಸಕರು ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಅರ್ಹರಿಗೆ ಆದ್ಯತೆ ನೀಡಬೇಕು ಈವರೆಗೆ ಅನರ್ಹರು ಹೆಚ್ಚಾಗಿರುವ ಬಗ್ಗೆ ಮಾಹಿತಿಯಿದ್ದು ನವೀಕರಣ ಸಂಧರ್ಭದಲ್ಲಿ ಅವರುಗಳನ್ನು ವಜಾಗೊಳಿಸಬೇಕೆಂದು ತಾಕೀತು ಮಾಡಿದರು.
ಕಟ್ಟಡ ನಿರ್ಮಾಣ ಮಾಡುವಂತಹಾ ಗಾರೆ ಕೆಲಸಗಾರರು, ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವವರು ಸೇರಿದಂತೆ ಕಟ್ಟಡಗಳಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರು ದೂಳು ಮತ್ತು ಇತರ ಮಾಲಿನ್ಯಕ್ಕೆ ಒಳಗಾಗಲಿದ್ದಾರೆ ಆದ್ದರಿಂದ ಸರ್ಕಾರದ ನಿಯಮದಂತೆ ಇಲಾಖೆಯ ವತಿಯಿಂದ ಮಾಡಿಸುವ
ಆರೋಗ್ಯ ತಪಾಸಣೆಯಲ್ಲಿ ಪಾಲ್ಗೋಳ್ಳಬೇಕೆಂದರು.
ಕಾರ್ಮಿಕರ ಅನುಕೂಲಕ್ಕಾಗಿ ಮೈಸೂರು- ಹಾಸನ ರಸ್ತೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಸಹಾಯವಾಣಿ ತೆರೆಯಲಿದ್ದು ಕಾರ್ಮಿಕರು ಸೇರಿದಂತೆ ಸರ್ಕಾರದ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವವರು ಉಚಿತವಾಗಿ ಕಛೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು.
ಕಾರ್ಮಿಕರಿಗೆ ವಿವಿಧ ಮಾದರಿಯ ಕಿಟ್‌ಗಳ ಜತೆಗೆ ಅವರ ಮಕ್ಕಳಿಗೆ ಲ್ಯಾಪ್‌ಟಾಪ್ ಮತ್ತು ಶಾಲಾ ಬ್ಯಾಗ್‌ಗಳನ್ನು ಶಾಸಕರು ವಿತರಿಸಿದರು.

ಪುರಸಭೆ ಅಧ್ಯಕ್ಷ ಶಿವುನಾಯಕ್, ಮೈಸೂರು ಜಿಲ್ಲಾ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಚೇತನ್‌ಕುಮಾರ್, ತಾಲೂಕು ಕಾರ್ಮಿಕ ನಿರೀಕ್ಷಕ ಹೆಚ್.ಕೆ.ಗೋವಿಂದರಾಜು, ತಹಶೀಲ್ದಾರ್‌ಗಳಾದ ಜಿ.ಸುರೇಂದ್ರಮೂರ್ತಿ, ಎಸ್.ಎನ್.ನರಗುಂದ್ ಪುರಸಭೆ ಅಧ್ಯಕ್ಷ ನರಸಿಂಹರಾಜು, ಸದಸ್ಯರಾದ ಕೋಳಿಪ್ರಕಾಶ್, ಶಂಕರ್‌ಸ್ವಾಮಿ, ಮಾಜಿ ಸದಸ್ಯ ಕೆ.ವಿನಯ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಆದ ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್‌ಜಾಬೀರ್, ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಹೆಚ್.ಹೆಚ್.ನಾಗೇಂದ್ರ, ಮುಖಂಡರಾದ
ಜಯರಾಮೇಗೌಡ, ಆದರ್ಶ, ವಸೀಮ್, ದೊಡ್ಡೇಗೌಡ, ಪರಮೇಶ್, ಕಾಂತರಾಜು ಮತ್ತಿತರರು ಹಾಜರಿದ್ದರು.