ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ತಾಲೂಕಿನ ಚಂದಗಾಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋವಿಂದೇಗೌಡ ಮತ್ತು ಉಪಾಧ್ಯಕ್ಷರಾಗಿ ಸಿ.ಡಿ. ರಾಜಶೇಖರ ಅವಿರೋಧವಾಗಿ ಆಯ್ಕೆಯಾದರು. ಸಂಘದ ಆಡಳಿತ ಕಚೇರಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್. ರವಿ ಆಯ್ಕೆಯನ್ನು ಪ್ರಕಟಿಸಿದರು.
ಚುನಾವಣಾ ಸಭೆಯಲ್ಲಿ ಸಂಘದ ನಿರ್ದೇಶಕರಾದ ಪಿ.ಹೆಚ್. ಗೌತಮ್, ಪುಟ್ಟಮಹದೇವಪ್ಪ, ಚಿಕ್ಕಣ್ಣಯ್ಯ, ಮಹದೇವ, ರೋಹಿತ್, ಗೀತಾ, ಜಿ.ಟಿ. ಆಶಾ, ಜವರಪ್ಪ, ರಾಜನಾಯಕ, ಸಂಘದ ಕಾರ್ಯ ನಿರ್ವಹಣಾಧಿಕಾರಿ ಸಿ.ಜೆ. ರಾಜಲಕ್ಷ್ಮಿ ಉಪಸ್ಥಿತರಿದ್ದರು.