Friday, April 18, 2025
Google search engine

Homeರಾಜ್ಯಸುದ್ದಿಜಾಲಕೆ.ಆರ್.ನಗರ: ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮುಖಂಡರು, ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ಕೆ.ಆರ್.ನಗರ: ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮುಖಂಡರು, ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೆ.ಆರ್.ನಗರ ಪಟ್ಟಣದ ಗರುಡಗಂಭ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಎರಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದು ಪಟಾಕಿ ಸಿಡಿಸಿ ಸಂಭ್ರಮಿಸಿ, ಶಾಸಕ ಡಿ.ರವಿಶಂಕರ್, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಜಯಗಳಿಸಿದ ಅಭ್ಯರ್ಥಿಗಳಿಗೆ ಜಯಕಾರ ಕೂಗಿದರು.

ಈ ಸಂದರ್ಭದಲ್ಲಿ ಹಾಜರಿದ್ದ ನೂರಾರು ಮಂದಿ ಮುಖಂಡರು ಮತ್ತು ಕಾರ್ಯಕರ್ತರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ವರಿಷ್ಠರು ತೀರ್ಮಾನಿಸಿ ಅಭ್ಯರ್ಥಿಯಗಳನ್ನಾಗಿ ಮಾಡಿದ ಸಿ.ಪಿ.ಯೋಗೇಶ್ವರ್, ಅನ್ನಪೂರ್ಣತುಕಾರಂ ಮತ್ತು ಯಾಸಿರ್ ಪಠಾಣ್ ಅವರುಗಳು ಅತ್ಯಾಧಿಕ ಬಹುಮತಗಳಿಂದ ಜಯಗಳಿಸಿರುವುದಕ್ಕೆ ವರಿಷ್ಠರಿಗೆ ಕೃತಜ್ಞತೆ
ಸಲ್ಲಿಸುತ್ತೇವೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ನವರ ಅಪಪ್ರಚಾರ ಮತ್ತು ಜಾತಿ ರಾಜಕಾರಣಕ್ಕೆ ಆದ್ಯತೆ ನೀಡದ ಮೂರು ಕ್ಷೇತ್ರದ ಮತದಾರರು ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಬಡವರ ಪರವಾದ ಅಭಿವೃದ್ದಿ ಕಾರ್ಯಗಳಿಗೆ ಮನ್ನಣೆ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರಲ್ಲದೆ ಮುಂದೆಯೂ ಈ ರೀತಿಯಲ್ಲೇ ರಾಜ್ಯದಲ್ಲಿ ಚುನಾವಣೆ
ನಡೆಯಲಿದ್ದು ೨೦೨೮ಕ್ಕೂ ಇದೇ ಮನ್ನಣೆ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟರಲ್ಲದೆ ಮುಂದೆಯೂ ಈ ರೀತಿಯಲ್ಲೇ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು ೨೦೨೮ಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕುಟುಂಬ ರಾಜಕಾರಣಕ್ಕೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ
ಕಲಿಸಿದ್ದಾರೆಂದು ಸಾಬೀತಾಗಿದೆ ಎಂದು ಹೇಳಿದ ಕಾಂಗ್ರೆಸ್ ಪಕ್ಷದ ಮುಖಂಡರು ಈಗಲಾದರೂ ಜೆಡಿಎಸ್ ಮತ್ತು
ಬಿಜೆಪಿಯವರು ಎಚ್ಚೆತ್ತುಕೊಂಡು ಸರ್ಕಾರದ ವಿರುದ್ದ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದರು.

ಕಾಂಗ್ರೆಸ್ ಪಕ್ಷದ ವರಿಷ್ಠರಾದ ಪ್ರಿಯಾಂಕ ಗಾಂಧಿ ಅತ್ಯಾಧಿಕ ಬಹುಮತಗಳಿಂದ ಜಯಗಳಿಸಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಹರ್ಷವ್ಯಕ್ತಪಡಿಸಿದರು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಚರ‍್ನಹಳ್ಳಿಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್ ಮಾತನಾಡಿದರು.

ಪುರಸಭೆ ಸದಸ್ಯರಾದ ಕೆ.ಜಿ.ಸುಬ್ರಮಣ್ಯ, ಶಂಕರ್, ನಟರಾಜು, ಮಾಜಿ ಅಧ್ಯಕ್ಷ ನರಸಿಂಹರಾಜು, ಮಾಜಿ ಸದಸ್ಯರಾದ ಕೆ.ವಿನಯ್, ಸೈಯದ್‌ಅಸ್ಲಾಂ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಟಿ.ಮಹದೇವ್, ಅರವಿಂದ್, ಮುಖಂಡರಾದ ಸಿ.ಆರ್.ಲೋಕೇಶ್‌ಭರಣಿ, ನಾಗರಾಜನಾಯಕ, ಸುಧಾಕರ್, ನಾಗೇಂದ್ರ, ಕೆ.ಎನ್.ಪ್ರಸನ್ನಕುಮಾರ್, ಶಿವಕುಮಾರ್, ಸಂಜಯ್‌ತಿಲಕ್.ಜೆ, ಡಿ.ಕೆ.ಕೊಪ್ಪಲುರಾಜಯ್ಯ, ಬಿ.ಹೆಚ್.ಕುಮಾರ್,
ರಮೇಶ್, ಸಂಪತ್‌ಕುಮಾರ್, ಕೃಷ್ಣೇಗೌಡ, ಪುಟ್ಟರಾಜು, ಮಹದೇವಸ್ವಾಮಿ, ಶಿವರಾಜು, ಆದರ್ಶ, ರಾಜಯ್ಯ ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular