ಮಂಡ್ಯ: ಕೆಆರ್ ಎಸ್ ಡ್ಯಾಂ ಭರ್ತಿಯಾದ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ಮಂಡ್ಯದ ಕಾವೇರಿ ನೀರಾವರಿ ನಿಗಮದ ಆವರಣದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಮುಖಂಡ ಶಿವನಂಜು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಕಳೆದ ವರ್ಷ ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಚಾಮುಂಡೇಶ್ವರಿ ಕೃಪೆಯಿಂದ ಮಳೆಯಾಗಿ ಕೆ.ಆರ್.ಎಸ್ ಡ್ಯಾಂ ಭರ್ತಿಯಾಗಿದೆ. ಕಾವೇರಮ್ಮ ನಮ್ಮೆಲ್ಲರ ಕಾಯುತ್ತಿದ್ದಾಳೆ.
ಸಿಎಂ ಸಿದ್ದರಾಮಯ್ಯ, ಕರ್ನಾಟಕದ ಉಕ್ಕಿನ ಮನುಷ್ಯ ಡಿಕೆ ಶಿವಕುಮಾರ್, ಚಲುವರಾಯಸ್ವಾಮಿ ನೇತೃತ್ವದಲ್ಲಿ ಬಾಗೀನ ಅರ್ಪಿಸಲಾಗುವುದು. ಆ ದಿನ ಮಂಡ್ಯ ಗಡಿ ಭಾಗದಿಂದ ಸ್ವಾಗತ ಮಾಡಿ ಬಾಗೀನ ಕಾರ್ಯಕ್ರಮ ನಡೆಸಲಾಗುವುದು. ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದೇವೆ ನಾಡಿನ ಜನತೆಗೆ ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು.