Sunday, April 20, 2025
Google search engine

Homeರಾಜ್ಯಸುದ್ದಿಜಾಲಕೆಎಸ್‌ಆರ್‌ಟಿಸಿ: ಟಿಕೆಟ್ ರಹಿತ 2,748 ಪ್ರಯಾಣಿಕರಿಗೆ ದಂಡ

ಕೆಎಸ್‌ಆರ್‌ಟಿಸಿ: ಟಿಕೆಟ್ ರಹಿತ 2,748 ಪ್ರಯಾಣಿಕರಿಗೆ ದಂಡ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಟಿಕೆಟ್ ರಹಿತ ೨,೭೪೮ ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ.

ಕೆಎಸ್‌ಆರ್‌ಟಿಸಿ ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು೨,೭೪೮ ಪ್ರಯಾಣಿಕರಿಗೆ ದಂಡ ವಿಧಿಸಿವೆ ಎಂದು ಹೇಳಿದೆ. ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ ೪೩,೬೯೮ ವಾಹನಗಳನ್ನು ತನಿಖೆಗೊಳಪಡಿಸಿ, ೨,೭೪೮ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಇದರಂತೆ ಟಿಕೆಟ್ ರಹಿತ ಪ್ರಯಾಣಿಕರಿಂದ ೪.೪೬ ರೂ ದಂಡವನ್ನು ವಸೂಲಿ ಮಾಡಲಾಗಿದೆ ಎಂದು ತಿಳಿಸಿದೆ.

ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ೬೩,೯೧೪ ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದೆ.

RELATED ARTICLES
- Advertisment -
Google search engine

Most Popular