Sunday, April 20, 2025
Google search engine

Homeಸ್ಥಳೀಯಗದ್ದೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್: ೪೦ಕ್ಕೂ ಹೆಚ್ಚು ಮಂದಿಗೆ ಗಾಯ

ಗದ್ದೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್: ೪೦ಕ್ಕೂ ಹೆಚ್ಚು ಮಂದಿಗೆ ಗಾಯ

ಮೈಸೂರು : ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದಿದ್ದು, ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದೆ. ಬಸ್ ಬಿದ್ದ ರಭಸಕ್ಕೆ ಸೀಟುಗಳೆಲ್ಲ ಮುರಿದು ಒಂದರ ಮೇಲೊಂದು ಬಿದ್ದಿವೆ. ಚಾಲಕನ ಕೈ ಮುರಿದಿದ್ದು, ಕೆಲವು ಪ್ರಯಾಣಿಕರ ತಲೆಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.

ಗಾಯಾಳುಗಳಿಗೆ ಕೆ ಆರ್ ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ ೭೦ ಪ್ರಯಾಣಿಕರಿದ್ದರು. ಗಾಯಗೊಂಡವರ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

RELATED ARTICLES
- Advertisment -
Google search engine

Most Popular