Saturday, April 19, 2025
Google search engine

Homeಅಪರಾಧಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ೪೦ಕ್ಕೂ ಹೆಚ್ಚು ಜನರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ೪೦ಕ್ಕೂ ಹೆಚ್ಚು ಜನರಿಗೆ ಗಾಯ

ಬಳ್ಳಾರಿ: ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿ ಪಲ್ಟಿ ಹೊಡೆದು ೪೦ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ರಸ್ತೆಯಲ್ಲಿ ಇಂದು ಸಂಭವಿಸಿದೆ.

ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮಕ್ಕಳನ್ನು ಆಂಬ್ಯುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್‌ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಗಿರೆನಹಳ್ಳಿ ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್‌ನಲ್ಲಿ ಶಾಲಾ, ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಕಂಡಕ್ಟರ್ ಕೈ ಮುರಿದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಬಳ್ಳಾರಿಯಿಂದ ಹಡ್ಲಗಿ ಗ್ರಾಮಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಗದ್ದೆಗೆ ಪಲ್ಟಿಯಾಗಿತ್ತು. ಸುಮಾರು ೫೦ ಕ್ಕೂ ಹೆಚ್ಚು ಜನರು ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದು, ೯ ಜನ ಗಾಯಗೊಂಡಿದ್ದರು. ಗಾಯಾಳುಗಳನ್ನು ಮೋಕಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಮೋಕಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

RELATED ARTICLES
- Advertisment -
Google search engine

Most Popular