ಹನೂರು: ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿಯ ಬಾಗಿಲಿನಿಂದ ಬಿದ್ದು ಮಹಿಳೆಯೊಬ್ಬರೂ ಸಾವನ್ನಪ್ಪಿರುವ ಘಟನೆ ತಾಳುಬೆಟ್ಟ ಸಮೀಪದ ತಿರುವಿನಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಕರಡಿಕೆರೆ ಗ್ರಾಮದ ವಿನೋದಾ (45) ಮೃತಪಟ್ಟ ಮಹಿಳೆ.
ಇವರು ಮಧ್ಯಾಹ್ನ ೧೨ರ ವೇಳೆಯಲ್ಲಿ ಮ.ಬೆಟ್ಟದಿಂದ ಹನೂರಿನ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಬಾಗಿಲು ಸಮೀಪದ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದರು. ಈ ವೇಳೆ ತಾಳುಬೆಟ್ಟ ಸಮೀಪದ ೨ನೇ ತಿರುವಿನಲ್ಲಿ ಇವರು ಬಾಗಿಲಿನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಹನೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದರು. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.