ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಹಾಗೂ ಅವರ ಉನ್ನತ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ದೂರ ಶಿಕ್ಷಣದ ಪ್ರಾದೇಶಿಕ ಕಚೇರಿಯನ್ನು ಪಿರಿಯಾಪಟ್ಟಣದಲ್ಲಿ ನಿರ್ಮಾಣ ಮಾಡಲು ಆದೇಶವಾಗಿದ್ದು, ಇದಕ್ಕೆ ಮೂಲ ಕಾರಣಕರ್ತರಾದ ಹಾಗೂ ತಾಲೂಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಸಚಿವ ಕೆ.ವೆಂಕಟೇಶ್ ಅವರಿಗೆ ಅಭಿನಂದನೆಗಳು ಎಂದು ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರ ಶೆಟ್ಟಿ ತಿಳಿಸಿದ್ದಾರೆ.