Wednesday, April 30, 2025
Google search engine

Homeರಾಜ್ಯಸುದ್ದಿಜಾಲಕುಡುಪು ಹತ್ಯೆ ಪ್ರಕರಣ: ವಯನಾಡಿನ ಅಶ್ರಫ್ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

ಕುಡುಪು ಹತ್ಯೆ ಪ್ರಕರಣ: ವಯನಾಡಿನ ಅಶ್ರಫ್ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರ ಹೊರವಲಯದ ಕುಡುಪು ಸಮೀಪ ದುಷ್ಕರ್ಮಿಗಳ ಗುಂಪೊಂದು ಥಳಿಸಿ ಹತ್ಯೆಗೈದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಕೇರಳದಿಂದ ವಯನಾಡಿನಿಂದ ಆಗಮಿಸಿದ ಆತನ ಮನೆಮಂದಿ ಮೃತದೇಹವನ್ನು ಇಂದು ಕೊಂಡೊಯ್ದಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಕುಂಞಾಯಿ ಎಂಬವರ ಪುತ್ರ ಅಶ್ರಫ್ ಕೊಲೆಯಾದ ವ್ಯಕ್ತಿ. ಈ ಬಗ್ಗೆ ಮಾಹಿತಿ ಪಡೆದಿದ್ದ ಅಶ್ರಫ್ ಕುಟುಂಬಸ್ಥರು ತಡರಾತ್ರಿ ಮಂಗಳೂರಿಗೆ ಆಗಮಿಸಿದ್ದರು. ಅಶ್ರಫ್ ಅವರ ಸಹೋದರ ಸೇರಿದಂತೆ ಆಗಮಿಸಿದ್ದ ಮೂವರು ವೆನ್ಲಾಕ್ ಶವಾಗಾರದಲ್ಲಿರಿಸಿದ್ದ ಮೃತದೇಹ ಅಶ್ರಫ್ ಅವರದ್ದೆಂದು ಗುರುತಿಸಿದರು. ಈ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಬಳಿಕ ಮೃತದೇಹವನ್ನು ಬಂದರ್ ನ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿಗೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಮಯ್ಯಿತ್ ನಮಾಝ್ ನಿರ್ವಹಿಸಿದ ಬಳಿಕ ಮುಂಜಾನೆ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಮಲಪ್ಪುರಂಗೆ ಕೊಂಡೊಯ್ಯಲಾಯಿತು.

RELATED ARTICLES
- Advertisment -
Google search engine

Most Popular