Friday, April 18, 2025
Google search engine

Homeರಾಜ್ಯಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೆಲಸ ಮಾಡಿಲ್ಲ :ಡಿಕೆಶಿ

ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೆಲಸ ಮಾಡಿಲ್ಲ :ಡಿಕೆಶಿ

ಬೆಂಗಳೂರು: ಕುಮಾರಸ್ವಾಮಿ ಅವರು ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಸರಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂದು ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೀಗೆ ತಿರುಗೇಟು ಕೊಟ್ಟರು.
“ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು ಎಂದು ಮರು ಪ್ರಶ್ನಿಸಿದರು.

ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರೊಂದಿಗೆ ನಿಮ್ಮ ಡಿಸಿಎಂ ಕಾರ್ಯಕ್ರಮದ ನಡುವೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ? ನಮಗೂ ರಾಜಕಾರಣ ಬರುತ್ತದೆ. ಆದರೆ ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಸೇವೆ ಮುಖ್ಯ. ಆದ ಕಾರಣ ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ತಿವಿದರು.

RELATED ARTICLES
- Advertisment -
Google search engine

Most Popular