Wednesday, April 16, 2025
Google search engine

Homeರಾಜ್ಯಪ್ರಜ್ವಲ್ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ: ಸಚಿವ ಎಂ ಬಿ...

ಪ್ರಜ್ವಲ್ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ, ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರ್ಕಾರ ಉರುಳಿ ಬೀಳಲಿದೆ ಎನ್ನುವ ಎಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ೨೦ ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿಜಯಪರದಲ್ಲಂತೂ ಕಾಂಗ್ರೆಸ್ ಅಭ್ಯರ್ಥಿ ಒಂದು ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular