ಬೆಂಗಳೂರು: ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ ಕುಮಾರಸ್ವಾಮಿ ಇಂದು ಕುಟುಂಬ ಸಮೇತ ಭೇಟಿ ನೀಡಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
‘ಉಷೋದಯಕ್ಕೆ ಮುನ್ನ ಕುಟುಂಬ ಸಮೇತ ತಿರುಮಲಕ್ಕೆ ತೆರಳಿ ಕಲಿಯುಗ ಪ್ರತ್ಯಕ್ಷ ದೈವ, ವೈಕುಂಠವಾಸ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ದರ್ಶನ ಭಾಗ್ಯ ಪಡೆದು ಪುನೀತನಾದೆ ಎಂದು ತಿಳಿಸಿದ್ದಾರೆ.
2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ, ದೃಢ ಸಂಕಲ್ಪ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರದ್ದಾಗಿದ್ದು, ಪ್ರಧಾನಿಗಳ ಆಶಯದಂತೆ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಅಥವಾ ವೈಜಾಗ್ ಸ್ಟೀಲ್ ಪುನಶ್ಚೇತನಕ್ಕೆ ₹11,400 ಕೋಟಿಗಳ ಬೃಹತ್ ಪ್ಯಾಕೇಜ್ ಘೋಷಿಸಲಾಗಿದೆ. ಇದು ಶ್ರೀ ಮೋದಿ ಅವರ ಸರಕಾರ ಕೈಗೊಂಡ ಐತಿಹಾಸಿಕ ನಿರ್ಧಾರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ಯಾಕೇಜ್ ಘೋಷಣೆ ನಂತರ ಇಂದು ಬೆಳಗ್ಗೆ ಶ್ರೀ ಬಾಲಾಜಿಯ ದರ್ಶನ ಪಡೆದು ನನ್ನ ಸಹೋದ್ಯೋಗಿ ಹಾಗೂ ಬೃಹತ್ ಕೈಗಾರಿಕೆ & ಉಕ್ಕು ಖಾತೆ ಸಹಾಯಕ ಸಚಿವರಾದ ಶ್ರೀ ಭೂಪತಿ ರಾಜು ಶ್ರೀನಿವಾಸವರ್ಮ
ಅವರೊಂದಿಗೆ ವಿಶಾಖಪಟ್ಟಣಕ್ಕೆ ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.