Friday, April 10, 2026
Google search engine

Homeಸ್ಥಳೀಯಕುಮಾರಸ್ವಾಮಿ ಮಾನವೀಯತೆ : ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ತಕ್ಷಣ ಸ್ಪಂದನೆ

ಕುಮಾರಸ್ವಾಮಿ ಮಾನವೀಯತೆ : ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ತಕ್ಷಣ ಸ್ಪಂದನೆ

ಮೈಸೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮಾನವೀಯ ಮುಖ ಮೈಸೂರಿನಲ್ಲಿ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಹಾಸಿಗೆ ಹಿಡಿದ ಯುವತಿ ಹಾಗೂ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಅವರು ತಕ್ಷಣ ಸ್ಪಂದಿಸಿ ನೆರವಿನ ಹಸ್ತ ಚಾಚಿದ್ದಾರೆ.

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಪೂಜಾ (24) ಎಂಬ ಮಹಿಳೆ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದು, ಕುಟುಂಬ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿತ್ತು. ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕುಮಾರಸ್ವಾಮಿ ಸ್ವತಃ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಪೂಜಾ ಅವರ ನಿವಾಸಕ್ಕೆ ತೆರಳಿ, ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು ಅನಾರೋಗ್ಯದ ಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಪೂಜಾ ಪತಿ ರವಿ, ತಂದೆ ಕುಮಾರ ಹಾಗೂ ತಾಯಿ ಶೀಲಾ ಅವರಿಗೆ ಧೈರ್ಯ ತುಂಬಿ, ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಸಾಂತ್ವಾನದ ಜೊತೆಗೆ ತಕ್ಷಣ ಧನಸಹಾಯ ನೀಡಿದ್ದಾರೆ.

ಇದಕ್ಕೂ ನಡುವೆ, ಪತಿ ರವಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಕುಟುಂಬ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ. ಪೋಷಕರ ಆಶ್ರಯದಲ್ಲಿ ಬದುಕು ಸಾಗಿಸುತ್ತಿರುವ ಈ ಕುಟುಂಬದ ಪರಿಸ್ಥಿತಿ ಕಂಡು ಕುಮಾರಸ್ವಾಮಿ ಮರುಕ ವ್ಯಕ್ತಪಡಿಸಿದರು.

ಮನೆಯ ಲೀಸ್ ಹಣವನ್ನು ತಾನೇ ಭರಿಸುವುದಾಗಿ ಭರವಸೆ ನೀಡಿದ ಅವರು, ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಜೊತೆಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪೂಜಾ ಅವರ ವಿಡಿಯೋ ಗಮನಕ್ಕೆ ಬಂದ ಹಿನ್ನೆಲೆ ಈ ನೆರವು ಲಭಿಸಿದೆ. ವಿಡಿಯೋ ಚಿತ್ರೀಕರಿಸಿದ್ದ ಚೇತನ್ ಅವರ ಕಾರ್ಯವನ್ನು ಕುಮಾರಸ್ವಾಮಿ ಮೆಚ್ಚಿಕೊಂಡರು.

ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಪೂಜಾಗೆ ಈಗಾಗಲೇ 11 ಶಸ್ತ್ರಚಿಕಿತ್ಸೆಗಳು ನಡೆದಿದ್ದು, ಇನ್ನಷ್ಟು ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular