ನವದೆಹಲಿ: ಪಂಜಾಬ್ ನ ಪಾಟಿಯಾರ ರಸ್ತೆಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಉಂಟಾದಂತ ಅಪಘಾತದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.
ಇಂದು ದೆಹಲಿಯಲ್ಲಿ ಕರೆಯಲಾಗಿದ್ದಂತ ರೈತ ಮುಖಂಡರ ಸಭೆಯಲ್ಲಿ ಭಾಗಿಯಾಗೋದಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಪಂಜಾಬ್ ನ ಪಾಟಿಯಾಲದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ, ಅಪಘಾತ ಸಂಭವಿಸಿದೆ.
ಕಾರು ಅಪಘಾತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಅಂದಹಾಗೇ ಕಳೆದ ಒಂದು ವರ್ಷದಿಂದ ದೆಹಲಿಯ ಕರ್ನೂಲಿ ಗಡಿಯಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯ ಸಂಬಂಧ ಕರೆಯಲಾಗಿದ್ದಂತ ಸಭೆಯಲ್ಲಿ ಭಾಗವಹಿಸೋದಕ್ಕೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಕಾರು ಅಪಘಾತಗೊಂಡು, ಕುರುಬೂರು ಶಾಂತಕುಮಾರ್ ಗಾಯಗೊಂಡಿದ್ದಾರೆ.