Thursday, April 3, 2025
Google search engine

Homeಅಪರಾಧಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರ ಸಾವು

ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರ ಸಾವು

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ 3 ಯುವಕರು ಸಾವನ್ನಪ್ಪಿರುವ ಘಟನೆ ಗುರುವಾರ ಕೊಡಗಿನ ಕುಶಾಲನಗರದಲ್ಲಿ ನಡೆದಿದೆ.

ಕೊಡಗು ಜಿಲ್ಲೆ ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ಈ ದುರಂತ ಸಂಭವಿಸಿದ್ದು, ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟಿದ್ದಾರೆ.

ಮೂಲಗಳ ಪ್ರಕಾರ ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದು, ಮೃತರನ್ನು ವಿನೋದ್, ಸಚಿನ್, ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಈ ಮೂವರು ಯುವಕರು ಮುಳ್ಳುಸೋಗೆ, ಚಿಕ್ಕತ್ತೂರು, ಹೆಬ್ಬಾಲೆ ಮೂಲದವರು ಎಂದು ತಿಳಿದುಬಂದಿದೆ.

ಜತೆಯಾಗಿ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ‌ ಸಾವನ್ನಪ್ಪಿರುವ ಶಂಕೆ ಇದ್ದು, ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದುಬಾರೆಯ ರ‍್ಯಾಫ್ಟಿಂಗ್‌ ಸಿಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ನಾಪತ್ತೆಯಾದವರ ಹುಡುಕಾಟ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular