Monday, May 4, 2026
Google search engine

Homeಸಿನಿಮಾಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯದ ಕೊರತೆ..! ಸುಪ್ರೀಂ ಮಹತ್ವದ ಆದೇಶ

ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯದ ಕೊರತೆ..! ಸುಪ್ರೀಂ ಮಹತ್ವದ ಆದೇಶ

ಬೆಂಗಳೂರು: ಇತ್ತೀಚಿಗಷ್ಟೇ ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ಯಾವುದೇ ಬೆಳಕು ಇಲ್ಲದ ಸೆಲ್‌ನಲ್ಲಿ ಅವರನ್ನ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಆರೋಪಿಸಿದ್ದರು. ಇದಕ್ಕೆ ಸಂಬಂಂಧಿಸಿದಂತೆ, ಜೈಲಿನಲ್ಲಿ ದರ್ಶನ್‌ಗೆ ಮೂಲ ಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠ, ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ 1 ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಸಾಕ್ಷಿಗಳ ವಿಚಾರಣೆ ಪ್ರಗತಿ ಬಗ್ಗೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ನೀಡಿಲ್ಲ. ದರ್ಶನ್ ಅವರನ್ನು ಬೆಳಕು ಇಲ್ಲದ ಸೆಲ್‌ನಲ್ಲಿ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ವಾದಿಸಿದ್ದರು. ವಾದ ಆಲಿಸಿದ ನ್ಯಾಯಾಲಯ ಈವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆಯಾಗಿದೆ. ಇನ್ನು ಉಳಿದ ಸಾಕ್ಷ್ಯಗಳ ವಿಚಾರಣೆ ಪ್ರಕ್ರಿಯೆಗೆ ಎಷ್ಟು ಸಮಯ ಬೇಕು ಎಂಬುದರ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದೆ.

RELATED ARTICLES
- Advertisment -
Google search engine

Most Popular