ನವದೆಹಲಿ: ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಾಗಿರುವ ಹಿನ್ನಲೆಯಲ್ಲಿ ಈ ವರ್ಷ ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಬೆಂಗಳೂರಿಗೆ ಸದ್ಯಕ್ಕೆ ಕುಡಿಯುವ ನೀರು ಸಮಸ್ಯೆ ಆಗದಂತೆ ಆದ್ಯತೆ ನೀಡಲಾಗುತ್ತದೆ. ಈ ವರ್ಷ ತಮಿಳುನಾಡಿಗೆ ನೀರು ಬಿಡಲು ಆಗಲ್ಲ. ಕೇಂದ್ರ ಸಚಿವರನ್ನ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದರು.
ಕಳಸಾ-ಬಂಡೂರಿ ಕೃಷ್ಣ ನದಿ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇನೆ. ಕೃಷ್ನ ನದಿಯ ಗೆಜೆಟ್ ನೋಟಿಫಿಕೇಷನ್ ಪೆಂಡಿಂಗ್ ಬಗ್ಗೆ ಮಾಹಿತಿ ನೀಡಿದ್ದೇನೆ. ಮೇಕೆದಾಟು ಯೋಜನೆ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಬೇಕು ಕಾನೂನು ತಜ್ಞರ ಸಲಹೆ ಪಡೆದು ಕೇಂದ್ರ ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದರು.