Monday, December 2, 2024
Google search engine

Homeಆರೋಗ್ಯಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರು - ಆಸ್ಪತ್ರೆಗೆ ದಾಖಲು

ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಲಾಲು ಪ್ರಸಾದ್‌ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕುಟುಂಬದ ಸದಸ್ಯರು ಆಸ್ಪತ್ರೆಗೆ ಹಾಜರಾಗಿದ್ದು, ಅವರ ಆರೈಕೆಯಲ್ಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಪ್ರಿನ್ಸ್‌ ಯಾದವ್‌ ಎಂಬವರು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದು, ಲಾಲು ಪ್ರಸಾದ್‌ ಯಾದವ್‌ ಅವರು ಅನಾರೋಗ್ಯದ ಕಾರಣ ಏಮ್ಸ್‌ಗೆ ದಾಖಲಾಗಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರನ್ನು ಪ್ರಾರ್ಥಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮಾಜಿ ಸಿಎಂ ಆಸ್ಪತ್ರೆಯ ಬೆಡ್‌ನಲ್ಲಿರುವ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular