Friday, April 18, 2025
Google search engine

Homeಸ್ಥಳೀಯಕೊನೆಯ  ಆಷಾಡ ಶುಕ್ರವಾರ: ನಾಡ ದೇವಿ ಚಾಮುಂಡೇಶ್ವರಿಗೆ ನಾಗಲಕ್ಷ್ಮಿ ಅಲಂಕಾರ

ಕೊನೆಯ  ಆಷಾಡ ಶುಕ್ರವಾರ: ನಾಡ ದೇವಿ ಚಾಮುಂಡೇಶ್ವರಿಗೆ ನಾಗಲಕ್ಷ್ಮಿ ಅಲಂಕಾರ

ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಹಿನ್ನಲೆಯಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ.

ಭಕ್ತರು ಬೆಳಗ್ಗೆಯಿಂದಲೇ ತಾಯಿಯ ದರ್ಶನ ಪಡೆಯುತ್ತಿದ್ದು, ರಾತ್ರಿಯವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಅನುಕೂಲಕ್ಕಾಗಿ ಸರತಿ ಸಾಲಿನ ವ್ಯವಸ್ಥೆ ಹಾಗೂ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗರ್ಭಗುಡಿಯ ಒಳಗಿರುವ ಮೂಲ ಚಾಮುಂಡೇಶ್ವರಿ ಮೂರ್ತಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಉತ್ಸವ ಮೂರ್ತಿಗೆ ನಾಗಲಕ್ಷ್ಮೀ ಅಲಂಕಾರ ಮಾಡಿರುವುದು ಆಕರ್ಷಣೀಯವಾಗಿದೆ.

ಚಾಮುಂಡಿ ಬೆಟ್ಟದಲ್ಲಿ ಕೊನೆಯ ಹಾಗೂ ನಾಲ್ಕನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ಬೆಳಗ್ಗೆ 3:30 ರಿಂದಲೇ ಚಾಮುಂಡಿ ತಾಯಿಯ ಮೂಲ ಮೂರ್ತಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಿಸಲಾಗಿದೆ.

ನಾಲ್ಕನೇ ಆಷಾಢ ಶುಕ್ರವಾರದ ನಿಮಿತ್ತ, ಹೆಚ್ಚಿನ ಭಕ್ತರು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ಬೆಳಗ್ಗೆ 5:30 ರಿಂದ ರಾತ್ರಿ 9:30ರವರೆಗೆ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ಇನ್ನು ಭಕ್ತರು ತಮ್ಮ ಖಾಸಗಿ ವಾಹನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವುದನ್ನು ನಿಷೇಧ ಹೇರಲಾಗಿದೆ. ಬೆಟ್ಟದ ಪಾದದ ಬಳಿ ಲಲಿತ್ ಮಹಲ್ ಮೈದಾನದಿಂದ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳಗ್ಗೆಯಿಂದ ರಾತ್ರಿ 8:30 ರವರೆಗೆ ಉಚಿತ ಬಸ್ ವ್ಯವಸ್ಥೆ ಇರಲಿದೆ. ಭಕ್ತರು ತಮ್ಮ ಖಾಸಗಿ ವಾಹನಗಳನ್ನು ಲಲಿತ್ ಮಹಲ್ ಮೈದಾನದ ಪಕ್ಕದಲ್ಲಿ ಪಾರ್ಕಿಂಗ್ ಮಾಡಿ, ಬಸ್ ​ನಲ್ಲಿ ಉಚಿತವಾಗಿ ಪ್ರಯಾಣಿಸಿ ದರ್ಶನ ಪಡೆಯಬಹುದು.

ನೂಕುನುಗ್ಗಲನ್ನು ಹತೋಟಿಯಲ್ಲಿಡಲು ದೇವಸ್ಥಾನದ ವ್ಯವಸ್ಥಾಪಕ ಮಂಡಳಿ ದರ್ಶನಕ್ಕೆ ರೂ. 300 ಹಾಗೂ ರೂ. 50 ನಿಗದಿಪಡಿಸಿ ವಿಶೇಷ ವ್ಯವಸ್ಥೆಯನ್ನೂ ಕಲ್ಪಿಸಿದೆ. 65 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು ರೂ.50 ಟಿಕೆಟ್ ಖರೀದಿಸಿ ಚಾಮುಂಡೇಶ್ವರಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.

RELATED ARTICLES
- Advertisment -
Google search engine

Most Popular