Saturday, April 12, 2025
Google search engine

Homeಅಪರಾಧಕಾನೂನುಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್ : ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್ : ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಧಾರವಾಡ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದ ಹೋರಾಟಗಾರರು, ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವ ಹೊತ್ತಲ್ಲೇ, ಸುವರ್ಣಸೌಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೀಗ ಈ ಒಂದು ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ವಿಚಾರಕ್ಕೆ ಸಂಬಂಧ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ವಕೀಲರ ಪರಿಷತ್ ಸೇರಿ ನಾಲ್ವರು ಧಾರವಾಡ ಹೈಕೋರ್ಟ್​​​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸರ್ಕಾರ, ಗೃಹ ಇಲಾಖೆ, ಪೊಲೀಸ್ ಇಲಾಖೆಗೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿಯಾಗಿದೆ ಎಂದು ತಿಳಿದುಬಂದಿದೆ.

ಅರ್ಜಿ ಕುರಿತಂತೆ ಧಾರವಾಡದಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಲಾಠಿ ಚಾರ್ಜ್ ಬಳಿಕ ಎಫ್‌ಐಆರ್ ಆಗಿದೆ. 12 ಜನರ ಮೇಲೆ ಎಫ್‌ಐಆರ್ ಮಾಡಿದ್ದಾರೆ. ಅದನ್ನು ರದ್ದುಪಡಿಸಬೇಕು ಎಂದು ಕೇಳಿದ್ದೆವು. ಸಿಎಂ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದೆವು. ಆದರೆ, ಯಾವುದಕ್ಕೂ ಸಿಎಂ ಸ್ಪಂದಿಸಿಲ್ಲ. ಹೀಗಾಗಿ ಕೋರ್ಟ್ ಮೊರೆ ಹೋಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನಮ್ಮ ಪರವಾಗಿ ಪ್ರಭುಲಿಂಗ ನಾವದಗಿ, ಪೂಜಾ ಸವದತ್ತಿ ವಾದ ಮಂಡಿಸಿದ್ದಾರೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶ ಆಗಿದೆ. ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಹಲ್ಲೆ ಆಗಿದ್ದಕ್ಕೆ ಸಮಾಜದವರು ದೃತಿಗೆಡುವುದು ಬೇಡ. ಹಲ್ಲೆ ಆದವರಿಗೆ ಆತ್ಮಸ್ಥೈರ್ಯ ತುಂಬಲಿದ್ದೇವೆ. ಬೆಳಗಾವಿಯಲ್ಲಿ ಡಿ.23ಕ್ಕೆ ಗಾಯಗೊಂಡವರ ಮನೆ ಮನೆಗೆ ಭೇಟಿ ನೀಡುತ್ತೇವೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular