ಬೆಳಗಾವಿ : ಬೆಳಗಾವಿಯಲ್ಲಿ ಸುವರ್ಣ ಸೌಧ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಘಟನೆಯ ಸಂಪೂರ್ಣ ಮಾಹಿತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದುಕೊಂಡರು. ಬೆಳಗಾವಿಯ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಕರಣದ ಕುರಿತು ಮಾಹಿತಿ ನೀಡಿದರು.
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿರುವ ಕುರಿತಂತೆ, ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷನ್ ಮಾಹಿತಿ ನೀಡಿದ್ದು, ಅವರಿಂದ ವಿಡಿಯೋ ಮತ್ತು ಹೈಕೋರ್ಟ್ ಆದೇಶದ ಪ್ರತಿಯನ್ನು ಸಿಎಂ ಸಿದ್ದರಾಮಯ್ಯ ಪಡೆದುಕೊಂಡಿದ್ದಾರೆ. ಈ ಕುರಿತಂತೆ ಹೈಕೋರ್ಟ್ ಹೋರಾಟಕ್ಕೆ ಅನುಮತಿ ನೀಡಿತ್ತು.
ಆದರೆ ಪ್ರತಿಭಟನೆ ವೇಳೆ ಹೈ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದು ಬೆಳಗಾವಿ ಡಿಸಿ ಮಾಹಿತಿ ನೀಡಿದ್ದಾರೆ.ಲಾಠಿಚಾರ್ಜ್ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣವಾದ ಮಾಹಿತಿ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದರು. ಸದನದಲ್ಲಿ ಸಿದ್ದರಾಮಯ ಈ ಕುರಿತು ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.