Friday, April 18, 2025
Google search engine

Homeರಾಜ್ಯಪಂಚಮಸಾಲಿ ಜನರ ಮೇಲೆ ಲಾಠಿ ಚಾರ್ಜ್‌, ನ್ಯಾಯಾಂಗ ತನಿಖೆಗೆ ನೀಡಿ: ಆರ್.ಅಶೋಕ ಆಗ್ರಹ

ಪಂಚಮಸಾಲಿ ಜನರ ಮೇಲೆ ಲಾಠಿ ಚಾರ್ಜ್‌, ನ್ಯಾಯಾಂಗ ತನಿಖೆಗೆ ನೀಡಿ: ಆರ್.ಅಶೋಕ ಆಗ್ರಹ

ಬೆಂಗಳೂರು: ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರು ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಮಾರಣಾಂತಿಕವಾಗಿ ಹೊಡೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮುದಾಯದ ಜನರು ರೊಚ್ಚಿಗೆದ್ದು ರಾಜ್ಯಾದ್ಯಂತ ಹೋರಾಟ ನಡೆಸಿದ್ದಾರೆ. ಈ ಘಟನೆಯನ್ನು ವಿಧಾನಸಭೆಯಲ್ಲಿ ಖಂಡಿಸಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ಇದನ್ನು ನ್ಯಾಯಾಂಗ ತನಿಖೆಗೆ ವಹಿಸಿ, ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅನ್ನ ಕೊಡುವ ಪಂಚಮಸಾಲಿಗಳ ಮೇಲೆ ಕೈ ಮಾಡಿದ್ದಕ್ಕೆ ಸರ್ಕಾರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರೂ, ಕಾಂಗ್ರೆಸ್‌ ನಾಯಕರು ಅದಕ್ಕೆ ಸಮ್ಮತಿಸಿಲ್ಲ. ಲಾಠಿ ಚಾರ್ಜ್‌ ಮಾಡಿರುವುದು ಸರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ. ಈ ವಿಚಾರದಲ್ಲಿ ಸದನದಲ್ಲಿ ಆರ್‌ಎಸ್‌ಎಸ್‌ ಹೆಸರು ತಂದಿರುವುದು ಅಕ್ಷಮ್ಯ. ಇದನ್ನು ಕಡತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದ್ದೇವೆ ಎಂದರು.

ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಇಡೀ ವರ್ಷ ಚುನಾವಣೆ ನಡೆಯುತ್ತಲೇ ಇರುತ್ತದೆ. ನೀತಿ ಸಂಹಿತೆಯಿಂದಾಗಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ಜನರ ತೆರಿಗೆ ಹಣ ದುಂದುವೆಚ್ಚವಾಗುತ್ತಿದೆ. ಆದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂತಹ ಉತ್ತಮ ಮಸೂದೆಯನ್ನು ತಂದಿದೆ. ಇದನ್ನು ವಿರೋಧ ಮಾಡುವವರಿಗೆ ದೇಶ ಒಂದು ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹವರಿಗೆ ತೆರಿಗೆದಾರರ ಹಣದ ಬಗ್ಗೆ ಕಾಳಜಿ ಇಲ್ಲ ಎಂದರು.

RELATED ARTICLES
- Advertisment -
Google search engine

Most Popular