Friday, April 18, 2025
Google search engine

Homeಸ್ಥಳೀಯಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಅಗತ್ಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಮೈಸೂರು: ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸಂಬಂಧ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಸಂಬಂಧ ವಾಹನ ನಿಲುಗಡೆ ಸೂಕ್ತವಾದ ವ್ಯವಸ್ಧೆ ಮಾಡಬೇಕು. ಕಾರ್ಯಕ್ರಮದಲ್ಲಿ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ , ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ಅವರು ತಿಳಿಸಿದರು.

ವೇದಿಕೆ ನಿರ್ಮಾಣ, ಮೊಬೈಲ್ ಶೌಚಾಲಯ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಹಾಗೂ ವೈದ್ಯರ ತಂಡ ನಿಯೋಜಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅರ್ಷದ್ ಉರ್ ರೆಹಮಾನ್ ಷರೀಫ್, ಮೂಡಾ ಆಯುಕ್ತರಾದ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

RELATED ARTICLES
- Advertisment -
Google search engine

Most Popular