ಬೆಂಗಳೂರು: ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರದ ಆರೋಪಕ್ಕೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಮನವಿ ಮಾಡಲಾಗಿದೆ’ ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಹಗರಣದ ನಾಲ್ಕನೇ ಆರೋಪದ ಪ್ರಕರಣದಲ್ಲಿ ಐದು ದಿನಗಳ ಪೊಲೀಸ್ ಕಸ್ಟಡಿ ಮುಕ್ತಾಯವಾದ ಕಾರಣ ಆತನಿಗೆ, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು.
ಈ ವೇಳೆ ಪ್ರಜ್ವಲ್ ಪರ ವಕೀಲ ಜಿ.ಅರುಣ್ ಅವರ ಮನವಿಯನ್ನು ನ್ಯಾಯಾಧೀಶರು ಆಲಿಸಿದರು. ನಿಮ್ಮ ಈ ಮನವಿಯನ್ನು ಜೈಲು ಅಧಿಕಾರಿಗಳಿಗೆ ನೀಡಿ. ಅವರು ಅವಕಾಶ ನೀಡದೇ ಇದ್ದಲ್ಲಿ ವಿಚಾರಣೆ ನಡೆಸೋಣ ಎಂದು ಸೂಚಿಸಿದರು. ಪ್ರಜ್ವಲ್ ಅವರನ್ನು ಜುಲೈ ೮ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ವಿಚಾರಣೆ ಮುಂದೂಡಲಾಗಿದೆ.