Tuesday, April 22, 2025
Google search engine

Homeರಾಜಕೀಯಮೈಸೂರಿನಿಂದ ಲಕ್ಷ್ಮಣ್, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ಕೈ ಟಿಕೆಟ್ ಅಂತಿಮ

ಮೈಸೂರಿನಿಂದ ಲಕ್ಷ್ಮಣ್, ಚಾಮರಾಜನಗರದಿಂದ ಹೆಚ್.ಸಿ.ಮಹದೇವಪ್ಪ ಪುತ್ರನಿಗೆ ಕೈ ಟಿಕೆಟ್ ಅಂತಿಮ

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಎಂ.ಲಕ್ಷ್ಮಣ್ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಂತಿಮ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸ್ಥಳೀಯ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಸ್ಥಳೀಯ ನಾಯಕರಿಗೆ ಸಿಎಂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ಲೋಕಸಭಾ ಕ್ಷೇತ್ರದಿಂದ ಮಗನನ್ನು ಕಣಕ್ಕೆ ಇಳಿಸಲು ಸಿದ್ದರಾಮಯ್ಯ ಸುತಾರಾಂ ಒಪ್ಪಿಲ್ಲ. ಯಾವುದೇ ಕಾರಣಕ್ಕೂ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ ಅಂತಾ ಕಡ್ಡಿ ತುಂಡಾಗುವಂತೆ ಕಾಂಗ್ರೆಸ್‌ನ ಸ್ಥಳೀಯ ನಾಯಕರಿಗೆ ಸಿಎಂ ಸ್ಪಷ್ಟಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular