Monday, July 13, 2026
Google search engine

Homeರಾಜಕೀಯಆಗಸ್ಟ್ 6ರಿಂದ ವಿಧಾನಸಭೆ ಮುಂಗಾರು ಅಧಿವೇಶನ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಆಗಸ್ಟ್ 6ರಿಂದ ವಿಧಾನಸಭೆ ಮುಂಗಾರು ಅಧಿವೇಶನ : ಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನವು ಆಗಸ್ಟ್‌ 6 ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಅಧಿವೇಶನದ ದಿನಾಂಕವನ್ನು ನಿಗದಿಪಡಿಸಿದೆ ಎಂದು ಹೇಳಿದರು.

ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಅಧಿಕೃತ ಕೆಲಸದ ನಿಮಿತ್ತ ಒಂದು ದಿನ ದೆಹಲಿಗೆ ತೆರಳಲಿದ್ದೇನೆ. ಬಳಿಕ ಪಕ್ಷದ ವರಿಷ್ಠರು ಮುಂದಿನ 3-4 ದಿನಗಳಲ್ಲಿ ಮತ್ತೊಂದು ಸಭೆಯ ದಿನಾಂಕ ನಿಗದಿಪಡಿಸಲಿದ್ದು, ಆ ನಂತರ ಮತ್ತೆ ದೆಹಲಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಹಾಗೂ ರೈಲ್ವೆ ಆಯೋಗದ ಮಾಜಿ ಅಧ್ಯಕ್ಷ ಎಚ್.ಹನುಮಂತಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ, ಕಳೆದ 45 ವರ್ಷಗಳಿಂದ ಅವರು ನನಗೆ ಆಪ್ತರಾಗಿದ್ದರು. ರಾಜ್ಯ ಹಾಗೂ ರಾಷ್ಟ್ರದ ಹಲವು ವಿಷಯಗಳಲ್ಲಿ ಮಾರ್ಗದರ್ಶನ ನೀಡಿದ ಹಿರಿಯ ನಾಯಕರನ್ನು ಕಳೆದುಕೊಂಡಿರುವುದು ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಮಂಡ್ಯ ಮತ್ತು ಶ್ರೀರಂಗಪಟ್ಟಣ ಭಾಗದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕೆಪಿಎಸ್‌ಸಿ ಅಧ್ಯಕ್ಷರ ಅಮಾನತು ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಹುದ್ದೆ ತೆರವಾಗಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಆಯೋಗದ ಹಿರಿಯ ಅಧಿಕಾರಿಗೆ ತಾತ್ಕಾಲಿಕವಾಗಿ ಜವಾಬ್ದಾರಿ ವಹಿಸಲು ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

RELATED ARTICLES
- Advertisment -
Google search engine

Most Popular