Friday, April 18, 2025
Google search engine

Homeರಾಜ್ಯಸುದ್ದಿಜಾಲಡಿ.9 ರಿಂದ 19ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ- ಯು.ಟಿ.ಖಾದರ್

ಡಿ.9 ರಿಂದ 19ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ- ಯು.ಟಿ.ಖಾದರ್

ಮಂಗಳೂರು(ದಕ್ಷಿಣ ಕನ್ನಡ): ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿ.9 ರಿಂದ 19ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಗುರುವಾರ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿ.9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಕಾನೂನು ಸಚಿವರು ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ʼಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಫಕ್ಷ ಸಹಕರಿಸಬೇಕುʼ ಎಂದು ಸ್ಪೀಕರ್ ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular