ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿದ್ದರಹಳ್ಳಿ ಗ್ರಾಮದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಚಿರತೆ ದಾಳಿ ನಡೆಸಿದ ಪರಿಣಾಮ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಂಜುನಾಥ್ (59) ಮತ್ತು ಮೂರ್ತಿ (60) ಎಂದು ಗುರುತಿಸಲಾಗಿದೆ. ಈ ಘಟನೆ ಕಡೂರು ಅರಣ್ಯ ಇಲಾಖೆ ಮತ್ತು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಜುನಾಥ್ ತಮ್ಮ ಮೊಮ್ಮಗನನ್ನು ಶಾಲೆಗೆ ಬಿಡಲು ಬೈಕ್‌ನಲ್ಲಿ ಹೊರಟಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಗ್ರಾಮಸ್ಥರು ತಕ್ಷಣ ಕಲ್ಲು ತೂರಿ ಚಿರತೆಯನ್ನ ಓಡಿಸಿ ಜೀವ ರಕ್ಷಿಸಿದ್ದಾರೆ. ಸಿದ್ದರಹಳ್ಳಿ, ಮದಗದಕೆರೆ, ಎಮ್ಮೆದೊಡ್ಡಿ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.