ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸಾವನ್ನಪ್ಪಿದ ಘಟನೆ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಅರಬ್ಬಿತಿಟ್ಟು ವನ್ಯಧಾಮ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ಸುಮಾರು ೪ ರಿಂದ ೫ ತಿಂಗಳ ಚಿರತೆ ಮರಿ ರಸ್ತೆಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿಸಿಎಫ್ ಸೌರಭ್ ಕುಮಾರ್ ಎಸಿಎಫ್ ಮಹದೇವಯ್ಯ ಸೇರಿ ಹಲವರು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಚಿರತೆ ಮರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.