Thursday, April 3, 2025
Google search engine

Homeಸ್ಥಳೀಯಮೈಸೂರಿನ ಲಿಂಗಾಂಬುಧಿ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಮೈಸೂರಿನ ಲಿಂಗಾಂಬುಧಿ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಮೈಸೂರು : ಇತ್ತೀಚಿಗೆ ಬೆಂಗಳೂರಿನ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿತ್ತು. ಇದೀಗ ಮೈಸೂರಿನಲ್ಲಿ ಕೂಡ ಚಿರತೆ ಪ್ರತ್ಯಕ್ಷವಾಗಿದ್ದು ಮೈಸೂರಿನ ಲಿಂಗಾಂಬುಧಿ ಉದ್ಯಾನವನದಲ್ಲಿ ಇದೀಗ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಹಲವರಿಗೆ ಚಿರತೆ ಓಡಾಡಿರುವುದು ಕಂಡು ಬಂದಿದೆ.

ಮೈಸೂರಿನ ಲಿಂಗಾಂಬುಧಿ ಕೆರೆ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ರಾಮಕೃಷ್ಣನಗರ ಸಮೀಪವಿರುವ ಲಿಂಗಾಂಬುಧಿ ಕೆರೆ ಉದ್ಯಾನವನದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಬೆಳಿಗ್ಗೆ ವಾಯುವಿಹಾರಕ್ಕೆ ತೆರಳಿದ್ದವರಿಗೆ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಚಿರತೆ ಕಂಡ ತಕ್ಷಣ ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ ಲಿಂಗಾಂಬುಧಿ ಕೆರೆ ಉದ್ಯಾನವನ ಸಾರ್ವಜನಿಕರ ಪ್ರವೇಶಕ್ಕೆ ಇದೀಗ ನಿರ್ಬಂಧ ವಿಧಿಸಲಾಗಿದ್ದು ,ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಚರಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular