ಬೆಂಗಳೂರು: ನಗರದ ನೈಸ್ ರಸ್ತೆ ಸಮೀಪದ ಭಾರತಿನಗರ 2ನೇ ಹಂತದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಕ್ಷಿಪ್ರ ಗಣಪತಿ ದೇವಾಲಯದ ಬಳಿ ರಸ್ತೆ ದಾಟುತ್ತಿರುವ ಚಿರತೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಬೋನುಗಳನ್ನು ಅಳವಡಿಸಲಾಗಿದ್ದು, ನಿಗಾ ತಂಡಗಳನ್ನು ನಿಯೋಜಿಸಲಾಗಿದೆ. ಚಿರತೆ ಸೆರೆ ಸಿಗುವವರೆಗೆ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಟ್ಟೆಚ್ಚರ ವಹಿಸಿ ನಿರಂತರ ನಿಗಾ ನಡೆಸುತ್ತಿದ್ದಾರೆ.



