ಹನೂರು : ಇಂಡಿಗನತ್ತ ನಾಗಮಲೆ ಮಾರ್ಗ ಮಧ್ಯದಲ್ಲಿ ಬಾಲಕನನ್ನು ಬಲಿ ಪಡೆದುಕೊಂಡಿದ್ದ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಸಮೀಪ ಅರಣ್ಯ ಇಲಾಖೆಯೂ ಇಟ್ಟಿದ್ದ ಬೋನಿಗೆ ಚಿರತೆ ಸೆರೆ ಸಿಕ್ಕಿದೆ.
ಕೆಲವು ದಿನಗಳ ಹಿಂದೆ ನಾಗಮಲೆ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಮೂಲದ ಬಾಲಕನನ್ನು ಎಳೆದೊಯ್ದು ಕೊಂದಿದ್ದ ಚಿರತೆ, ಸ್ಥಳೀಯ ಗ್ರಾಮಗಳಲ್ಲಿ ಮೇಕೆಗಳ ಮೇಲೂ ದಾಳಿ ನಡೆಸಿದ್ದರಿಂದ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿತ್ತು. ಮೊದಲ ದಿನವೇ ಕ್ಯಾಮೆರಾ ಟ್ರ್ಯಾಪ್ನಲ್ಲಿ ಚಿರತೆ ಕಾಣಿಸಿಕೊಂಡಿದ್ದರೂ, ಬಳಿಕ ಬೋನಿಗೆ ಬೀಳದೆ ತಪ್ಪಿಸಿಕೊಳ್ಳುತ್ತಿತ್ತು. ಆದರೆ ಇದೀಗ ಸತತ ಕಾರ್ಯಾಚರಣೆಯಿಂದ ರಾತ್ರೋರಾತ್ರಿ ಬೋನಿಗೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.



