Friday, April 11, 2025
Google search engine

Homeರಾಜ್ಯಬೆಂಗಳೂರಿನಲ್ಲಿ ಬೋನಿಗೆ ಬಿದ್ದ ಚಿರತೆ

ಬೆಂಗಳೂರಿನಲ್ಲಿ ಬೋನಿಗೆ ಬಿದ್ದ ಚಿರತೆ

ಬೆಂಗಳೂರು : ಬೆಂಗಳೂರಿನಲ್ಲಿ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ.

ಚಿರತೆ ಸೆರೆಗಾಗಿ ಸತತ 1 ವಾರ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.. ಕಳೆದ ವಾರ ಮಹಿಳೆಯೋರ್ವರನ್ನು ಚಿರತೆ ಬಲಿ ಪಡೆದಿತ್ತು, ಸೆರೆ ಹಿಡಿದ ಚಿರತೆ ಇದೇನಾ ಎಂಬುದು ಇನ್ನೂ ತಿಳಿದು ಬಂದಿಲ್ಲ. ಡಿಎನ್ ಎ ಪರೀಕ್ಷೆಯ ಬಳಿಕ ಈ ಬಗ್ಗೆ ಧೃಡವಾಗಲಿದೆ.

ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಕರಿಯಮ್ಮ (55) ಎಂಬ ಮಹಿಳೆಯನ್ನು ಚಿರತೆ ಕೊಂದು ಹಾಕಿತ್ತು. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿತ್ತು. ಬಳಿಕ ರುಂಡ ಮುಂಡ ಪ್ರತ್ಯೇಕವಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.

RELATED ARTICLES
- Advertisment -
Google search engine

Most Popular