ಬೆಳಗಾವಿ: ಸಾಹಿತ್ಯ, ಸಂಗೀತ, ನಾಟಕ, ಕಥೆ, ಕಾದಂಬರಿಗಳನ್ನು ರಚಿಸಿ ಜಗತ್ತಿಗೆ ಸಾರುವ ಮೂಲಕ ಸಮಾಜದಲ್ಲಿ ಸಮಾನತೆಯ ಮಹತ್ವ ಸಾರಿದ ಮಹಾನ್ ಕವಿ ವಿಶ್ವ ಮಾನವ, ರಾಷ್ಟ್ರಕವಿ ಕುವೆಂಪು ಎಂದು ಸಾಹಿತಿ ಟಿ. ಎಸ್ ವಂಟಗುಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಡಾ. 29ರಂದು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ವಿಶ್ವ ಮಾನವ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು. ಸಾಹಿತ್ಯ ವಿಮರ್ಶೆ, ಕಾವ್ಯ, ನಾಟಕ, ಕಥೆ, ಕಾದಂಬರಿ ಕ್ಷೇತ್ರಗಳಿಗೆ ಪುಟ್ಟಪ್ಪನವರ ಕೊಡುಗೆ ಸ್ಮರಣೀಯವಾಗಿದ್ದು, ಯುವ ಪೀಳಿಗೆ ಅಳವಡಿಸಿಕೊಳ್ಳಲು ಅವರು ವಿಧಿಸಿರುವ ಮಾರ್ಗದರ್ಶನ ತತ್ವಗಳು ಎಂದರು.

ಸಾಹಿತ್ಯ ಲೋಕದ ಕುವೆಂಪು: ಮಾನವ ಮತವೇ ವಿಶ್ವಮಾರ್ಗ ಎಂದು ಹೇಳಿದ ಕುವೆಂಪು ಅವರು ತಮ್ಮದೇ ಆದ ಶೈಲಿಯನ್ನು ತುಂಬಿಕೊಂಡು ರಾಜ್ಯ, ನುಡಿ, ಮನೆ, ಜಲ ಸಂಸ್ಕೃತಿಯನ್ನು ರಕ್ಷಿಸಲು ತಮ್ಮ ಹೃದಯದಿಂದ ಸಾಹಿತ್ಯವನ್ನು ಕಟ್ಟಿಕೊಟ್ಟ ಕನ್ನಡ ಸಾಹಿತ್ಯ ಲೋಕದ ಮಹಾನುಭಾವರು ಕುವೆಂಪು ಎಂದರು. ಕುವೆಂಪು ಅವರು ಕನ್ನಡ ಸಾಹಿತ್ಯದಲ್ಲಿ ಮಾಡಿರುವ ಸಾಧನೆಗೆ ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ, ಕರ್ನಾಟಕ ರತ್ನ ಪ್ರಶಸ್ತಿ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು. ಕುವೆಂಪು ಕನ್ನಡ ಸೇವೆ: ಕವಿಯಾಗಿ, ಲೇಖಕರಾಗಿ, ವಿಮರ್ಶಕರಾಗಿ, ನಾಟಕಕಾರರಾಗಿ, ಚಿಂತಕರಾಗಿ, ಪ್ರಾಧ್ಯಾಪಕರಾಗಿ, ಕುಲಪತಿಗಳಾಗಿ ಕುವೆಂಪುರು ಕನ್ನಡಕ್ಕೆ ಸಲ್ಲಿಸಿದ ಸೇವೆ ಎಂದು ಸಾಹಿತಿ ಟಿ.ಎಸ್.ವಂಟಗುಡಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಡಿಸಿ ವಿಜಯಕುಮಾರ ಹೊನಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಬೆಳಗಾವಿಯ ಹಿರಿಯ ಸಾಹಿತಿಗಳಾದ ಶ್ರೀರಂಗ ಜೋಶಿ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
