ದಾವಣಗೆರೆ: ಟಿ.ಬಿ ಕಾಯಿಲೆ ಬಗ್ಗೆ ಕೀಳರಿಮೆ ಬೇಡ, ತಕ್ಷಣ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು ಎಂದು ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಿ. ಪಟಗೆ ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾವಣಗೆರೆ ತಾಲ್ಲೂಕಿನಾದ್ಯಾಂತ ಜುಲೈ.25 ರಿಂದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಾ ಕಾರ್ಯ ನೆಡೆಯುತ್ತಿದ್ದು, ಎಲ್ಲಾ ಸಾರ್ವಜನಿಕರು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗೆ ಬಂದಾಗ ಸರಿಯಾಗಿ ಮಾಹಿತಿಯನ್ನು ನೀಡಬೇಕು ಹಾಗೂ ಜನರಲ್ಲಿ ರೋಗದ ಬಗ್ಗೆ ಅರಿವು ಮೂಡಿಸಬೇಕು. 2025 ಕ್ಕೆ ಕ್ಷಯಮುಕ್ತ ಭಾರತಕ್ಕೆ ಎಲ್ಲರೂ ಕೈ ಜೋಡಿಸುವಂತಗಬೇಕು ಎಂದರು.ಹಿರಿಯ ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕರಾದ ಎನ್.ಸಿ. ಹಾಲಸ್ವಾಮಿ ಹಾಗೂ ಎಂ.ಎಸ್. ಬಸವರಾಜ ಅವರು ಆರೋಗ್ಯ ಸಿಬ್ಬಂದಿಗಳಿಗೆ ತರಬೇತಿ ನೀಡಿದರು.
ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನೀರಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು