ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸಂವಿಧಾನದ ಮೂಲಕ ಭಾಬಾ ಸಾಹೇಬರು ಹಕ್ಕುಗಳನ್ನು ನೀಡಿದ್ದು ಮೀಸಲಾತಿಯಡಿ ವಿದ್ಯಾಭ್ಯಾಸ, ಉದ್ಯೋಗ ಮುಂತಾದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ್ದು ನಮ್ಮ ಹಕ್ಕುಗಳ ರಕ್ಷಣೆ ಹಾಗೂ ರಾಜಕೀಯವಾಗಿ ಸಾಧನೆ ಮಾಡಲು ಪ್ರತಿಯೊಬ್ಬರು ಸಂಘಟಿತರಾಗಿ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯದ್ಯಕ್ಷ ಬಿ.ಶಿವಣ್ಣ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅಹಿಂದ ಸಂಘಟನೆಯ ವಿವಿಧ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ದೇಶದಲ್ಲಿ ಹುಂದುಳಿದ ವರ್ಗದವರೇ ಶೇ ೭೫ ರಷ್ಟು ಇದ್ದು ನಮ್ಮ ನಾಯಕರು ಸಿದ್ದರಾಮಯ್ಯನವರು ಅವರನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಉದ್ದೇಶದಿಂದ ನಮ್ಮ ಈ ಸಂಘಟನೆ ಸ್ಥಾಪಿಸಲಾಗಿದ್ದು ಯುವಕರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಬೇಕು ಎಂದರು.
ರಾಜ್ಯದ ೩೧ ಜಿಲ್ಲೆಗಳಲ್ಲೂ ನಮ್ಮ ರಾಷ್ಟ್ರೀಯ ಅಹಿಂದ ಸಂಘಟನೆಯನ್ನು ರಚಿಸಲಾಗಿದ್ದು ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಾದ್ಯಮ ಘಟಕ, ಮಹಿಳಾ ಘಟಕಗಳು, ರೈತ ಮೋರ್ಚಾಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಘಟಕಗಳನ್ನು ಸ್ಥಾಪಿಸಿ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಸಂಘಟಿಸಿ ಯಾವುದೇ ಚುನಾವಣೆಗೆ ಅಹಿಂದ ವರ್ಗದ ಪ್ರತಿನಿಧಿಗಳು ಆಯ್ಕೆಯಾಗುವಂತೆ ಮಾಡೋಣ ಎಂದು ತಿಳಿಸಿದರು.
ಸಂಘಟನೆಗಳಿಗೆ ನೇಮಕ ಆಗುವವರು ಕೇವಲ ಅಧಿಕಾರಕ್ಕೆ ಅಂಟಿಕೊಳ್ಳದೆ ಸಂಘದ ಕಾರ್ಯ ಚಟುವಟಿಗಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅಭಿವೃದ್ಧಿ ಹಾಗೂ ಸಂಘದ ಉದ್ದೇಶವನ್ನು ಅರಿತು ಕೆಲಸ ನಿರ್ವಹಿಸಿ. ನಿಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಅಹಿಂದ ವರ್ಗದ ಏಳಿಗೆಗೆ ಅವಿರತವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ನಮ್ಮ ಸಂಘಟನೆಯ ವತಿಯಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಹಿಂದುಳಿದ, ಅಲ್ಪ ಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ದಗದವರನ್ನು ಗುರುತಿಸಿ ಅವರಿಗೆ ಶಕ್ತಿ ತುಂಬುವ ಮತ್ತು ನೋಂದವರ ನೆರವಿಗೆ ದಾವಿಸಿ ಅವರಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಸವಲತ್ತುಗಳನ್ನು ಕೊಡಿಸಲು ಕಾರ್ಯ ಯೋಜನೆ ರೂಪಿಸಿಕೊಂಡಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಸತ್ಯನಾರಾಯಣ್, ರಾಜ್ಯ ಸಂಘಟನಾ ಕಾರ್ಯದರ್ಶಿ ಲೋಕೇಶ್ ಭರಣಿ, ಮೈಸೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಗರುಡುಗಂಬ ಕೆ.ಎಸ್.ಮಂಜುನಾಥ್, ಒಬಿಸಿ ಜಿಲ್ಲಾ ಉಪಾಧ್ಯಕ್ಷ ಶಂಕರಮೂರ್ತಿ, ಮಂಡ್ಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ಸಿ.ಪ್ರದೀಪ್, ಕೆ.ಆರ್.ನಗರ ತಾಲೂಕು ಅಧ್ಯಕ್ಷ ಕೆ.ಎ.ಮಧು, ಎಸ್.ಸಿ.ಘಟಕದ ಅಧ್ಯಕ್ಷ ಕೃಷ್ಣಪ್ರಸಾದ್, ಸಾಲಿಗ್ರಾಮ ತಾಲೂಕು ಅಧ್ಯಕ್ಷ ಮಂಜುನಾಥ್, ಹುಣಸೂರು ತಾಲೂಕು ಅಧ್ಯಕ್ಷ ಅಂಜನಿ, ಎಸ್‌ಸಿ ಘಟಕದ ಅಧ್ಯಕ್ಷ ಮಹೇಶ್, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಶ್ರೀನಿವಾಸ್, ಕಾನೂನು ಸಲಹೆಗಾರ ಶಿವರಾಜು ಇನ್ನಿತರರು ಹಾಜರಿದ್ದರು.