ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ ಈ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರನ್ನು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಲಾಗಿದೆ. ಆಗ ಈ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿದ್ದಾರೆ.
ಈ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪ್ರಕಟಣೆಯಲ್ಲಿ ಇಂದು ತಿಳಿಸಿದ್ದಾರೆ.