ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಇಂದು ಬುಧವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ
ಶಾಸಕ ಮುನಿರತ್ನ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ೮೨ ಸಿಸಿಹೆಚ್ ಕೋರ್ಟ್, ಜಾಮೀನ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ ೧೪ ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
ಮೊದಲ ಎಫ್‌ಐಆರ್ನಲ್ಲಿ ಮುನಿರತ್ನ ವಿರುದ್ಧ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, ಸುಲಿಗೆ ಮಾಡಲು ವ್ಯಕ್ತಿಯನ್ನು ಗಾಯಗೊಳಿಸುವ ಭಯ, ವಂಚನೆ ಮತ್ತು ಸ್ವಯಂಪ್ರೇರಿತವಾಗಿ ಸಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ